ಉಡುಪಿ : ಭಾವಿ ಪರ್ಯಾಯ ಶೀರೂರು ಮಠದ ಪರ್ಯಾಯಪೂರ್ವ ಮುಹೂರ್ತಗಳಲ್ಲಿ ಮೂರನೆಯದಾದ ಕಟ್ಟಿಗೆ ಮುಹೂರ್ತ ಭಾನುವಾರ ಬೆಳಿಗ್ಗೆ 9.15ರ ಸಿಂಹಲಗ್ನ ಸುಮುಹೂರ್ತದಲ್ಲಿ ನಡೆಯಿತು.
ಅದಕ್ಕೂ ಮುನ್ನ ಶೀರೂರು ಮಠದಲ್ಲಿ ದಿವಾನ ಡಾ.ಉದಯಕುಮಾರ ಸರಳತ್ತಾಯ ನೇತೃತ್ವದಲ್ಲಿ ಪುರೋಹಿತ ಗಿರಿರಾಜ ಉಪಾಧ್ಯಾಯ ಅವರು ಶ್ರೀ ವಿಠಲ ದೇವರಿಗೆ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿ, ರಥಬೀದಿಯಲ್ಲಿ ಶ್ರೀ ಚಂದ್ರೇಶ್ವರ, ಶ್ರೀ ಅನಂತೇಶ್ವರ ನಂತರ ಕೃಷ್ಣ ಮಠದಲ್ಲಿ ಶ್ರೀಕೃಷ್ಣ ಮುಖ್ಯಪ್ರಾಣ ದೇವರಿಗೆ ಪ್ರಾರ್ಥನೆ ಸಲ್ಲಿಸಲಾಯಿತು.




