ಬೈಂದೂರು: ಉಡುಪಿ ಜಿಲ್ಲೆಯ ಬೈಂದೂರು ಸಮೀಪ ವ್ಯಕ್ತಿಯೊಬ್ಬರು ಯಡ್ತರೆ ಗ್ರಾಮದ ಜಾಮೀಯಾ ಮಸೀದಿಯ ಕೆರೆಯಲ್ಲಿ ಕಾಲು ತೊಳೆಯಲು ಹೋಗಿ ಆಕಸ್ಮಿಕವಾಗಿ ಕಾಲು ಜಾರಿ ನೀರಿನಲ್ಲಿ ಬಿದ್ದು ಮುಳುಗಿ ಮೃತಪಟ್ಟ ಘಟನೆ ನಡೆದಿದೆ.
ಮೃತಪಟ್ಟವರು ಬೈಂದೂರು ನಿವಾಸಿ ಅಬ್ದುಲ್ ರಹೀಮ್ ಅವರ ಮಗ ಆಯಾನ್ ರಝಾ ಎಂದು ತಿಳಿಯಲಾಗಿದೆ.
ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆ ಯುಡಿಆರ್ ಕ್ರಮಾಂಕ 31/2025 ಕಲಂ: 194 BNSS ರಂತೆ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.