Home Crime ಅತ್ಯಾಚಾರ ಪ್ರಕರಣ : 9 ವರ್ಷ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ….!!

ಅತ್ಯಾಚಾರ ಪ್ರಕರಣ : 9 ವರ್ಷ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ….!!

ವಿಟ್ಲ : ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು
ಠಾಣಾ ಪೊಲೀಸರು ಬಂಧಿಸಿದ್ದಾರೆ

ಬಿಹಾರ, ಪಾಟ್ನಾ ನಿವಾಸಿ ಬಬ್ಲೂ ಕುಮಾರ ಬಂಧಿತ ಆರೋಪಿ. 2015ನೇ ನವೆಂಬರ್ 4ರಂದು ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಮನೆಯೊಂದರಲ್ಲಿ ಅತ್ಯಾಚಾರ ಪ್ರಕರಣ ನಡೆದಿತ್ತು.

ಪ್ರಕರಣದಲ್ಲಿ ಆರೋಪಿಯಾಗಿದ್ದ ಬಿಹಾರ ಪಾಟ್ನಾ ನಿವಾಸಿ ಬಬ್ಲೂ ಕುಮಾರ ಎಂಬಾತ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದು, ಆತನನ್ನು ವಿಟ್ಲ ಠಾಣಾ ಪೊಲೀಸರು ಬಿಹಾರದ ಪಾಟ್ನಾ ಜಿಲ್ಲೆಯ ಬೀಟಾ ಎಂಬಲ್ಲಿಂದ ಅಲ್ಲಿನ ಪೊಲೀಸರ ಸಹಕಾರದಲ್ಲಿ ವಶಕ್ಕೆ ಪಡೆದು ಜು.13 ರಂದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.