ಉಡುಪಿ: ದೇಶಕ್ಕಾಗಿ ಹೋರಾಡಿದ ನಿವೃತ್ತ ಸೈನಿಕನಿಗೆ ಭಾನುವಾರ ರಾತ್ರಿ ಬ್ರಹ್ಮಾವರ ಸಾಸ್ತಾನ ಟೋಲ್ ಪ್ಲಾಜಾದಲ್ಲಿ ಅವಮಾನಪಡಿಸಿದ ಘಟನೆ ನಡೆದಿತ್ತು.
ಇದೀಗ ತಮ್ಮ ತಪ್ಪಿನಿಂದ ಎಚ್ಚೆತ್ತುಕೊಂಡ ಟೋಲ್ ಸಿಬ್ಬಂದಿ ನಿವೃತ್ತ ಯೋಧನ ಕ್ಷಮೆಯಾಚಿಸಿದ್ದಾರೆ.
ಸಾಸ್ತಾನ ಟೋಲ್ ಪ್ಲಾಜಾದ ಸಿಬ್ಬಂದಿಗಳಾದ ಶೀನ ಹಾಗೂ ಸುರೇಶ್ ವಿಡಿಯೋ ಮೂಲಕ ಕ್ಷಮಾಪಣೆ ಕೇಳಿದ್ದಾರೆ. ನಿವೃತ್ತ ಸೈನಿಕ ಶ್ಯಾಮರಾಜ್ ಅವರು ಟೋಲ್ ವಿನಾಯಿತಿ ಪತ್ರವನ್ನು ತೋರಿಸಿದ್ದರೂ, ಟೋಲ್ ಸಿಬ್ಬಂದಿ ವಿನಾಯಿತಿ ನೀಡಲು ನಿರಾಕರಿಸಿದ್ದಾರೆ.
ಈ ಬಗ್ಗೆ ಸ್ವತಃ ನಿವೃತ್ತ ಸೈನಿಕ ಶ್ಯಾಮರಾಜ್ ಅವರು ವಿಡಿಯೋ ದಾಖಲಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದು, ಘಟನೆ ದೇಶಾದ್ಯಂತ ಭಾರೀ ಚರ್ಚೆಗೆ ಕಾರಣವಾಗಿತ್ತು.





