ಬಂಟ್ವಾಳ: ತಾಲೂಕಿನಲ್ಲಿ ಕಳೆದ ಕೆಲ ದಿನಗಳಿಂದ ನಿರಂತರ ಮಳೆಯಾಗುತ್ತಿರುವುದರಿಂದ ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆ ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾ ಸಂಸ್ಗಳಿಗೆ ಮಂಗಳವಾರ(ಜು.15) ರಜೆ ಘೋಷಿಸಲಾಗಿದೆ.
ತಾಲೂಕಿನಲ್ಲಿ ಎರಡು – ಮೂರು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದೆ. ಮಂಜಾಗ್ರತಾ ಕ್ರಮವಾಗಿ ಮಂಗಳವಾರ ಮಂಗಳವಾರ ಎಲ್ಲಾ ಅಂಗನವಾಡಿ ಕೇಂದ್ರಗಳು ,ಪ್ರಾಥಮಿಕ ಮತ್ತು ಪ್ರೌಢಶಾಲೆ ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾ ಸಂಸ್ಗಳಿಗೆ ರಜೆ ಘೋಷಿಸಿ ಬಂಟ್ವಾಳ ತಾಲೂಕು ತಹಶೀಲ್ದಾರರು ಆದೇಶಿಸಿದ್ದಾರೆ.
ಉಳ್ಳಾಲ ತಾಲೂಕಿನಲ್ಲೂ ಭಾರೀ ಮಳೆಯಾಗುತ್ತಿದ್ದು, ಎಲ್ಲಾ ಶಾಲೆಗಳಿಗೆ ಜುಲೈ 15 ರಂದು ರಜೆ ಘೋಷಿಸಿ ತಹಶೀಲ್ದಾರರು ಆದೇಶಿಸಿದ್ದಾರೆ.