ಉಡುಪಿ: ನಗರದಲ್ಲಿ ವ್ಯಕ್ತಿಯೋರ್ವ ಅನುಮಾನಾಸ್ಪದ ರೀತಿಯಲ್ಲಿ ಕಂಡುಬಂದ ಮೇರೆಗೆ ಉಡುಪಿ ನಗರ ಪೊಲೀಸ್ ಠಾಣೆಯ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.
ಬಂಧಿತ ವ್ಯಕ್ತಿ ಮಂಜುನಾಥ ಪೂಜಾರಿ ಎಂದು ಗುರುತಿಸಲಾಗಿದೆ.
ಪೊಲೀಸರು ಪ್ರಕರಣ ದಾಖಲಿಸಿಕೊಂಡು ವಿಚಾರಣೆ ನಡೆಸುತ್ತಿದ್ದಾರೆ.
ಪ್ರಕರಣ ಸಾರಾಂಶ : ದಿನಾಂಕ 13/07/2025 ರಂದು ಮಂಜುನಾಥ ವಿ ಬಡಿಗೇರ, ಪೊಲೀಸ್ ನಿರೀಕ್ಷಕರು, ಉಡುಪಿ ನಗರ ಪೊಲೀಸ್ ಠಾಣೆ ಇವರು ರಾತ್ರಿ ಸೂಪರ್ ವೈಸಿಂಗ್ ರೌಂಡ್ಸ್ ಕರ್ತವ್ಯದಲ್ಲಿದ್ದು ದಿನಾಂಕ 14/07/2025 ರಂದು ಸಂಚರಿಸುತ್ತಿರುವಾಗ ಮುಂಜಾನೆ 2:00 ಗಂಟೆಗೆ ಉಡುಪಿ ತಾಲೂಕು ಪುತ್ತೂರು ಗ್ರಾಮದ ಗೋಪಾಲಪುರ ಬಸ್ ನಿಲ್ದಾಣದ ಹತ್ತಿರದ ಕಟ್ಟಡದ ಬಳಿ ಮರೆಯಲ್ಲಿ ಓರ್ವ ವ್ಯಕ್ತಿ ತನ್ನ ಇರುವಿಕೆಯನ್ನು ಮರೆಮಾಚಿಕೊಂಡು ಅನುಮಾನಾಸ್ಪದ ರೀತಿಯಲ್ಲಿ ಕಂಡುಬಂದ ಮೇರೆಗೆ ವಶಕ್ಕೆ ಪಡೆದು ವಿಚಾರಿಸಲಾಗಿ, ಆತನು ಸಮರ್ಪಕವಾದ ಉತ್ತರ ನೀಡದೆ ಇದ್ದು, ಯಾವುದೋ ಬೇವಾರಂಟು ತಕ್ಷೀರು ನಡೆಸುವ ಸಂಶಯ ಬಂದಿರುವುದರಿಂದ ಮಂಜುನಾಥ ಪೂಜಾರಿ (33) ಎಂಬಾತನ ವಿರುದ್ದ ಉಡುಪಿ ನಗರ ಪೊಲೀಸ್ ಠಾಣೆ ಅಪರಾಧ ಕ್ರಮಾಂಕ 130/2025 ಕಲಂ: 96(B) KP ACT ರಂತೆ ಪ್ರಕರಣ ದಾಖಲಾಗಿರುತ್ತದೆ.