ಮಲ್ಪೆ: ಉಡುಪಿ ಜಿಲ್ಲೆಯ ಮಲ್ಪೆ ಸಮೀಪ ಕಿದಿಯೂರು ಗ್ರಾಮದ ಕಪ್ಪೆಟ್ಟು ಬ್ರಹ್ಮ ಬೈದರ್ಕಳ ಗರಡಿಯ ಹತ್ತಿರ ಮಧ್ಯಾಹ್ನ ವೇಳೆ ಕೋಳಿ ಅಂಕಕ್ಕೆ ದಾಳಿ ನಡೆಸಿದ ಪೊಲೀಸರು ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
ಖಚಿತ ಮಾಹಿತಿಯಂತೆ ಮಲ್ಪೆ ಪೊಲೀಸಸರು ದಾಳಿ ನಡೆಸಿದಾಗ ಶರತ್, ಸಂದೇಶ, ಜಯಕರ, ರಮೇಶ, ಅರುಣ ಕುಮಾರ್ ಸೇರಿದಂತೆ ಕೆಲವು ಮಂದಿ ಓಡಿ ಪರಾರಿಯಾಗಿದ್ದಾರೆ ಎಂದು ಮಾಹಿತಿ ತಿಳಿದು ಬಂದಿದೆ.
ಸ್ಥಳದಲ್ಲಿದ್ದ 2,200ರೂ. ನಗದು, 10ಸಾವಿರ ರೂ. ಮೌಲ್ಯದ 10 ಹುಂಜ ಕೋಳಿ, ಕೋಳಿಯ ಕಾಲಿಗೆ ಕಟ್ಟಿದ ಎರಡು ಕತ್ತಿಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಈ ಬಗ್ಗೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ನಡೆಸಿದ್ದಾರೆ.




