ಕೋಟ: ಉಡುಪಿ ಜಿಲ್ಲೆಯ ಕೋಟ ಸಮೀಪ ಮಣೂರು ಗ್ರಾಮದ ಯುವನೊಬ್ಬನ ಮೇಲೆ ವ್ಯಕ್ತಿಯೊಬ್ಬರು ಏಕಾಏಕಿ ಬಿಯರ್ ಬಾಟಲಿನಿಂದ ತಲೆಗೆ ಹಲ್ಲೆ ನಡೆಸಿದ ಘಟನೆ ನಡೆದಿದೆ.
ಹಲ್ಲೆಗೊಳಾದ ವ್ಯಕ್ತಿ ಕೋಟ ಪಡುಕರೆ ನಿವಾಸಿ ಭರತ್ ಎಂದು ತಿಳಿದು ಬಂದಿದೆ.
ಹಲ್ಲೆ ನಡೆಸಿದ ಆರೋಪಿ ಮನೋಜ್ ಎಂದು ಗುರುತಿಸಲಾಗಿದೆ.
ಕೋಟ ಪೊಲೀಸ್ ಠಾಣೆಯಲ್ಲಿ ಹಲ್ಲೆ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಪ್ರಕರಣ ಸಾರಾಂಶ : ಪಿರ್ಯಾದಿ ಭರತ್ (24) ಪಡುಕೆರೆ, ಮಣೂರು ಗ್ರಾಮ ಇವರು ದಿನಾಂಕ:13.07.2025 ರಂದು ಸಂಜೆ 06.30 ಗಂಟೆಗೆ ಕುಂದಾಪುರ ತಾಲೂಕು ತೆಕ್ಕಟ್ಟೆಯ ಗಣೇಶ ವೈನ್ ಶಾಪ್ ಬಳಿ ಇರುವಾಗ ಆರೋಪಿ ಮನೋಜನು ಅವಾಚ್ಯ ಶಬ್ದಗಳಿಂದ ಬೈದಿದ್ದು, ಯಾಕೆ ಬೈಯುತ್ತೀಯಾ ಎಂದು ಕೇಳಿದ್ದಕ್ಕೆ ಆರೋಪಿ ಏಕಾಏಕಿ ಕೈಯಲ್ಲಿದ್ದ ಬಿಯರ್ ಬಾಟಲಿಯಿಂದ ತಲೆಗೆ ಬಲವಾಗಿ ಹೊಡೆದಿದ್ದು ಈ ಪರಿಣಾಮ ಪಿರ್ಯಾದಿದಾರರ ತಲೆಯ ಎಡಬದಿ ರಕ್ತಗಾಯವಾಗಿ ಪ್ರಜ್ಞೆ ತಪ್ಪಿ ಈ ಬಗ್ಗೆ ಕುಂದಾಪುರ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ವೈದ್ಯರ ಸಲಹೆಯಂತೆ ಹೆಚ್ಚಿನ ಚಿಕಿತ್ಸೆ ಬಗ್ಗೆ ಅಜ್ಜರಕಾಡು ಜಿಲ್ಲಾ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ಪಡೆದುಕೊಂಡಿರುವುದಾಗಿದೆ.
ಈ ಬಗ್ಗೆ ಕೋಟ ಪೊಲೀಸ್ ಠಾಣಾ ಅಪರಾಧ ಕ್ರಮಾಂಕ 131/2025 ಕಲಂ:118(1), 352 BNS ನಂತೆ ಪ್ರಕರಣ ದಾಖಲಾಗಿರುತ್ತದೆ