Home Crime ಮಂಗಳೂರು : ಕುಡುಪುವಿನಲ್ಲಿ ಅಶ್ರಫ್ ಗುಂಪು ಹತ್ಯೆ ಪ್ರಕರಣ : ಆರೋಪಿಗಳ ಜಾಮೀನು ಅರ್ಜಿ ವಿಚಾರಣೆ...

ಮಂಗಳೂರು : ಕುಡುಪುವಿನಲ್ಲಿ ಅಶ್ರಫ್ ಗುಂಪು ಹತ್ಯೆ ಪ್ರಕರಣ : ಆರೋಪಿಗಳ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ…!!

ಮಂಗಳೂರು: ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಕುಡುಪುವಿನಲ್ಲಿ ಗುಂಪು ಹಲ್ಲೆಯಿಂದ ಹತ್ಯೆಗೀಡಾದ ಅಶ್ರಫ್ ಪ್ರಕರಣಕ್ಕೆ ಸಂಬಂಧಿಸಿದಂತೆ 5 ಮಂದಿ ಆರೋಪಿಗಳ ಜಾಮೀನು ಅರ್ಜಿಯ ವಿಚಾರಣೆ ಮುಂದೂಡಿಕೆಯಾಗಿದೆ.

ಕುಡುಪು ಭಟ್ರ ಕಲ್ಲುರ್ಟಿ ದೈವಸ್ಥಾನದ ಹಿಂಬದಿಯ ಮೈದಾನದಲ್ಲಿ ಎ.24ರಂದು ಅಪರಾಹ್ನ 3ಕ್ಕೆ ಕ್ರಿಕೆಟ್ ಪಂದ್ಯ ನಡೆಯುತ್ತಿರುವ ವೇಳೆ ಗುಂಪು ಹಲ್ಲೆ ನಡೆಸಿದ ಪರಿಣಾಮ ಕೇರಳ ವಯನಾಡಿನ ಅಶ್ರಫ್ ಕೊಲೆಯಾಗಿದ್ದರು.

ಈ ಬಗ್ಗೆ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

ಈ ಗುಂಪು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ 21 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು. ಈ ಪೈಕಿ ಹೈಕೋರ್ಟ್‌ಗೆ ಜಾಮೀನಿಗೆ ಸಲ್ಲಿಸಿದ್ದ ಐವರ ಅರ್ಜಿಯ ವಿಚಾರಣೆ ನಡೆಸಲಾಗಿದೆ. ಆರೋಪಿಗಳಿಗೆ ಜಾಮೀನು ಲಭಿಸಿಲ್ಲ. ವಿಚಾರಣೆ ಮುಂದೂಡಿಕೆಯಾಗಿದೆ. ಸರಕಾರದ ಪರವಾಗಿ ನೇಮಿಸಲಾಗಿರುವ ವಿಶೇಷ ಸರಕಾರಿ ಅಭಿಯೋಜಕರು ವಾದ ಮಂಡಿಸಿದ್ದಾರೆ.