Home Crime 22 ವರ್ಷಗಳ ಹಿಂದೆ ಧರ್ಮಸ್ಥಳದಲ್ಲಿ ನಿಗೂಢ ನಾಪತ್ತೆಯಾಗಿದ್ದ ಎಂ.ಬಿ.ಬಿ.ಎಸ್ ವಿದ್ಯಾರ್ಥಿನಿ ಅನನ್ಯ ಭಟ್ ತಾಯಿ‌ಯಿಂದ ಜಿಲ್ಲಾ...

22 ವರ್ಷಗಳ ಹಿಂದೆ ಧರ್ಮಸ್ಥಳದಲ್ಲಿ ನಿಗೂಢ ನಾಪತ್ತೆಯಾಗಿದ್ದ ಎಂ.ಬಿ.ಬಿ.ಎಸ್ ವಿದ್ಯಾರ್ಥಿನಿ ಅನನ್ಯ ಭಟ್ ತಾಯಿ‌ಯಿಂದ ಜಿಲ್ಲಾ ಎಸ್ಪಿಗೆ ದೂರು…!!

ಮಂಗಳೂರು; ಜಿಲ್ಲೆಯ ಧರ್ಮಸ್ಥಳದಲ್ಲಿ 2003ರಲ್ಲಿ ನಾಪತ್ತೆಯಾಗಿದ್ದ ವೈದ್ಯಕೀಯ ವಿದ್ಯಾರ್ಥಿ ಅನನ್ಯ ಭಟ್ ತಾಯಿ ಎಸ್ಪಿ ಅವರಿಗೆ ದೂರು ನೀಡಿದ್ದಾರೆ.

ಅನನ್ಯ ಭಟ್ ಎಂಬ ಹೆಸರಿನ ವೈದ್ಯಕೀಯ ವಿಧ್ಯಾರ್ಥಿನಿಯು 2003ನೇ ಇಸವಿಯಲ್ಲಿ ಧರ್ಮಸ್ಥಳ ದೇವಸ್ಥಾನದ ವಠಾರದಿಂದ ಕಣ್ಮರೆಯಾಗಿದ್ದು, ಈ ಬಗ್ಗೆ ವಿಚಾರಣೆ ನಡೆಸುವಂತೆ ಯುವತಿಯ ತಾಯಿ ಸುಜಾತ ಭಟ್  ಜಿಲ್ಲಾ ಪೊಲೀಸ್ ಅಧೀಕ್ಷಕರ ಕಛೇರಿಗೆ ಭೇಟಿ‌ ನೀಡಿ ಪೊಲೀಸ್ ಅಧೀಕ್ಷಕರಿಗೆ ದೂರು ಅರ್ಜಿ ನೀಡಿದ್ದಾರೆ.

ಈ ದೂರಿನ ಬಗ್ಗೆ ವಿಚಾರಣೆ ನಡೆಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾ ಎಸ್ಪಿ ಡಾ.ಅರುಣ್ ಅವರು ತಿಳಿಸಿದ್ದಾರೆ.