ಕಾರ್ಕಳ: ಉಡುಪಿ ಜಿಲ್ಲೆಯ ಕಾರ್ಕಳ ಸಮೀಪ ವ್ಯಕ್ತಿಯೊಬ್ಬರು ತನ್ನ ಪತ್ನಿಯ ಮೇಲೆ ಕತ್ತಿಯಿಂದ ಹಲ್ಲೆ ನಡೆಸಿ ನಂತರ ತಾನು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಹಿರ್ಗಾನ ಗ್ರಾಮದ ಸುರೇಖಾ ಎಂಬವರ ಮೇಲೆ ಹಲ್ಲೆಯಾಗಿದೆ.
ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಗೋಪಾಲಕೃಷ್ಣ ಎಂದು ಗುರುತಿಸಲಾಗಿದೆ.
ಕಾರ್ಕಳ ಪೊಲೀಸರು ಪ್ರಕರಣ ದಾಖಲಿಸಿಕೊಂಡು ವಿಚಾರಣೆ ನಡೆಸುತ್ತಿದ್ದಾರೆ.
ಪ್ರಕರಣದ ಸಾರಂಶ : ಪಿರ್ಯಾದಿದಾರರಾದ ಸುರೇಖಾ (44), ಹಿರ್ಗಾನ ಗ್ರಾಮ, ಕಾರ್ಕಳ ಇವರ ಗಂಡ ಗೋಪಾಲಕೃಷ್ಣ (60) ಇವರು ದಿನಾಂಕ 15/07/2025 ರಂದು ಮದ್ಯಾಹ್ನ 2:15 ಗಂಟೆಗೆ ಪಿರ್ಯಾದಿದಾರರಿಗೆ ಕತ್ತಿಯಿಂದ ಹಲ್ಲೆ ಮಾಡಿ ಗಾಯಗೊಳಿಸಿ ಮೈಯಿಂದ ರಕ್ತಬರುವುದನ್ನು ನೋಡಿ ಹೆದರಿ ಮದ್ಯಾಹ್ನ 14:20 ಗಂಟೆಯಿಂದ 14:40 ಗಂಟೆಯ ಮದ್ಯಾವಧಿಯಲ್ಲಿ ಕಾರ್ಕಳ ತಾಲೂಕು ಹಿರ್ಗಾನ ಗ್ರಾಮದ ಚಿಕ್ಕಲ್‌ಬೆಟ್ಟು ನಡಿಮತ್ತಾವು ಎಂಬಲ್ಲಿ ತನ್ನ ಮನೆಯ ತೋಟದಲ್ಲಿ ಮರಕ್ಕೆ ಹಗ್ಗವನ್ನು ಕಟ್ಟಿ ಕುತ್ತಿಗೆಗೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿದೆ.
ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆ ಯುಡಿಆರ್ ಕ್ರಮಾಂಕ 27/2025 ಕಲಂ: 194 BNSS ರಂತೆ ಪ್ರಕರಣ ದಾಖಲಾಗಿರುತ್ತದೆ.