ಉಡುಪಿ: ಬಿಜೆಪಿಯ ಜಿಲ್ಲಾ ಹಿಂದುಳಿದ ವರ್ಗಗಳ ಮೋರ್ಚಾ, ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚ ಉಡುಪಿ ನಗರ, ಲಯನ್ಸ್ ಕ್ಲಬ್ ಪರ್ಕಳ (317 ಸಿ) ಹಾಗೂ ದಿವ್ಯಾಂಗ ರಕ್ಷಣ ಸಮಿತಿ ಉಡುಪಿ ಜಿಲ್ಲೆ ಇವರ ಸಹಯೋಗದಲ್ಲಿ ಉಚಿತ (ಕಿವಿ) ಶ್ರವಣ ತಪಾಸಣೆ ಮತ್ತು ಶ್ರವಣ ಯಂತ್ರಕ್ಕೆ ಸಹಾಯಧನ ಹಾಗೂ ವಿತರಣೆ ಕಾರ್ಯಕ್ರಮ ಎ.1ರಂದು ಮಲ್ಪೆ ಸಭಾಭವನದಲ್ಲಿ ನಡೆಯಲಿದೆ ಎಂದು ಉಡುಪಿ ಜಿಲ್ಲಾ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ಅಧ್ಯಕ್ಷ ಕೆ.ವಿಜಯ ಕೊಡವೂರು ತಿಳಿಸಿದ್ದಾರೆ.
ಉಡುಪಿಯಲ್ಲಿ ಕರೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು ಎ.1ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆವರೆಗೆ ಶಿಬಿರವು ನಡೆಯಲಿದ್ದು, ಮೊದಲು ಕರೆ ಮಾಡಿ ನೋಂದಾಯಿಸುವ 30 ಮಂದಿ ಈ ಸೌಲಭ್ಯವನ್ನು ಪಡೆದುಕೊಳ್ಳಬಹುದು. ಹಿರಿಯರಿಗೆ ಮೊದಲ ಆದ್ಯತೆ ನೀಡಲಾಗುವುದು.
ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ದೇಣಿಗೆ ಮೊತ್ತದಿಂದ ಶ್ರವಣ ಸಾಧನದ ಶೇ.40ರಷ್ಟು ಮೊತ್ತವನ್ನು ಸಹಾಯಧನದ ರೂಪದಲ್ಲಿ ಪಾವತಿಸಲಾಗುವುದು. ಹೆಚ್ಚಿನ ಮಾಹಿತಿಗಾಗಿ ಮೊಬೈಲ್: 9743581798 ಸಂಪರ್ಕಿಸುವಂತೆ ಅವರು ತಿಳಿಸಿದ್ದಾರೆ. ಸುದ್ದಿಗೋಷ್ಟಿಯಲ್ಲಿ ಉಪಾಧ್ಯಕ್ಷೆ ಭಾರತಿ ಚಂದ್ರಶೇಖರ್ ಹಾಗೂ ಕೋಶಾಧಿಕಾರಿ ರಾಜೇಂದ್ರ ಪಂದುಬೆಟ್ಟು ಉಪಸ್ಥಿತರಿದ್ದರು.





