Home Crime ರೇಣುಕಾಸ್ವಾಮಿ ಕೊಲೆ ಪ್ರಕರಣ : ನಟ ದರ್ಶನ್ ಜಾಮೀನು ರದ್ದು ಅರ್ಜಿ ವಿಚಾರಣೆ ಮೇ.14 ಕ್ಕೆ...

ರೇಣುಕಾಸ್ವಾಮಿ ಕೊಲೆ ಪ್ರಕರಣ : ನಟ ದರ್ಶನ್ ಜಾಮೀನು ರದ್ದು ಅರ್ಜಿ ವಿಚಾರಣೆ ಮೇ.14 ಕ್ಕೆ ಮುಂದೂಡಿಕೆ…!!

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಯಾಂಡಲ್ವುಡ್ ನಟ ದರ್ಶನ್ ಅವರಿಗೆ ನೀಡಲಾಗಿರುವ ಜಾಮೀನು ಕುರಿತು ಸುಪ್ರೀಂ ಕೋರ್ಟ್‌ನಲ್ಲಿ ರಾಜ್ಯ ಸರ್ಕಾರ ಅರ್ಜಿ ಸಲ್ಲಿಸಿತ್ತು. ಸುಪ್ರೀಂ ಕೋರ್ಟ್ ದ್ವಿಸದಸ್ಯ ಪೀಠದಲ್ಲಿ ಅರ್ಜಿ ವಿಚಾರಣೆ ನಡೆದಿದೆ.

ಕೊಲೆ ಪ್ರಕರಣದಲ್ಲಿ 7 ಆರೋಪಿಗಳ ಜಾಮೀನು ರದ್ದು ಕೋರಿ ರಾಜ್ಯ ಸರ್ಕಾರ ಅರ್ಜಿ ಸಲ್ಲಿಸಿದೆ. ರಾಜ್ಯ ಸರ್ಕಾರದ ಪರ ಹಿರಿಯ ವಕೀಲ ಸಿದ್ದಾರ್ಥ್ ಲೂಥ್ರಾ ಅವರು ವಾದ ಮಾಡಿದ್ದಾರೆ. ಮೇ 14ಕ್ಕೆ ವಿಚಾರಣೆ ಮುಂದೂಡಲಾಗಿದೆ.