ಮಂಗಳೂರು: ನಿರಂತರ ಮಳೆಯಾಗುತ್ತಿರುವುದರಿಂದ ಮುನ್ನೆಚ್ಚರಿಕಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆ, ಪದವಿ ಪೂರ್ವ ಕಾಲೇಜು, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾ ಸಂಸ್ಥೆಗಳಿಗೆ ಇಂದು(ಜು.17) ರಜೆ ಘೋಷಿಸಿ ಜಿಲ್ಲಾಧಿಕಾರಿಯವರು ಆದೇಶ ಹೊರಡಿಸಿದ್ದಾರೆ.
