Home Crime ಹಲವಾರು ವರ್ಷಗಳಿಂದ ತಲೆಮರೆಸಿಕೊಂಡು, ನ್ಯಾಯಾಲಯಕ್ಕೂ ಹಾಜರಾಗದೆ ಭೂಗತನಾಗಿದ್ದ ವಾರಂಟ್ ಆರೋಪಿ ಅರೆಸ್ಟ್…!!

ಹಲವಾರು ವರ್ಷಗಳಿಂದ ತಲೆಮರೆಸಿಕೊಂಡು, ನ್ಯಾಯಾಲಯಕ್ಕೂ ಹಾಜರಾಗದೆ ಭೂಗತನಾಗಿದ್ದ ವಾರಂಟ್ ಆರೋಪಿ ಅರೆಸ್ಟ್…!!

ಮಂಗಳೂರು : ಹಲವಾರು ವರ್ಷಗಳಿಂದ ತಲೆಮರೆಸಿಕೊಂಡು, ಪೊಲೀಸರ ಕಣ್ಣು ತಪ್ಪಿಸಿ ನ್ಯಾಯಾಲಯಕ್ಕೂ ಹಾಜರಾಗದೆ, ಭೂಗತನಾಗಿದ್ದ ಸುಹಾನ್ @ ಸೋನು, ಬಿರಾ ಪೂಜಾರಿ ಕಂಪೌಂಡ್, ಅಶೋಕ ನಗರ ಮಂಗಳೂರು ಎಂಬಾತನನ್ನು ದಿನಾಂಕ 29-03-2026 ರಂದು ಮುಂಬೈಯಲ್ಲಿ ಉರ್ವಾ ಪೊಲೀಸ್ ಪತ್ತೆಹಚ್ಚಿ, ಆರೋಪಿಯನ್ನು ಮಂಗಳೂರು ನ್ಯಾಯಾಲಯಕ್ಕೆ ಹಾಜರುಪಡಿಸಿರುತ್ತಾರೆ.

ಈತನ ವಿರುದ್ದ ಮಂಗಳೂರು ನಗರ ಉರ್ವಾ ಪೊಲೀಸ್ ಠಾಣಾ ಅ.ಕ್ರ. 62/2016, ಕಲಂ. 399, 120(B) ಐಪಿಸಿ, ಉರ್ವಾ ಪೊಲೀಸ್ ಠಾಣಾ ಅ.ಕ್ರ 126/2017, ಕಲಂ 120(B), 399, 402, 188 ಐಪಿಸಿ, ಮಂಗಳೂರು ಉತ್ತರ ಪೊಲೀಸ್ ಠಾಣಾ ಅ.ಕ್ರ, 32/2020 ಕಲಂ. 143 147 148 504 506 323 324 ಜೊತೆಗೆ 149 ಐಪಿಸಿ. ರಂತೆ ಹಲವಾರು ಪ್ರಕರಣಗಳು ದಾಖಲಾಗಿರುತ್ತದೆ.

ಆರೋಪಿಯು ಮಂಗಳೂರು ನಗರದ ಉರ್ವಾ ಪೊಲೀಸ್ ಠಾಣೆ ಮತ್ತು ಮಂಗಳೂರು ಉತ್ತರ ಪೊಲೀಸ್ ಠಾಣೆಯ ಪ್ರಕರಣಗಳಲ್ಲಿ ಆರೋಪಿಯಾಗಿದ್ದು, ಈತನ ವಿರುದ್ದ ಉರ್ವಾ ಪೊಲೀಸ್ ಠಾಣಾ ಪ್ರಕರಣದಲ್ಲಿ ನ್ಯಾಯಾಲಯವು ಎಲ್.ಪಿ.ಸಿ ವಾರಂಟ್ ಹೊರಡಿಸಿರುತ್ತದೆ.

ಆರೋಪಿತನನ್ನು ದಿನಾಂಕ 29-03-2026 ರಂದು ಮಹಾರಾಷ್ಟ್ರದ ಮುಂಬೈಯಲ್ಲಿ ಉರ್ವಾ ಪೊಲೀಸ್ ಠಾಣಾ ಎಎಸ್ಐ ಲಕ್ಷ್ಮಣ್ ಮತ್ತು ಸಿಬ್ಬಂದಿರವರು ಪತ್ತೆಹಚ್ಚಿ, ದಸ್ತಗಿರಿ ಮಾಡುವುದರಲ್ಲಿ ಯಶಸ್ವಿಯಾಗಿರುತ್ತಾರೆ. ಆರೋಪಿತನನ್ನು ಮಂಬೈಯಿಂದ ಕರೆತಂದು ಮಂಗಳೂರಿನ ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿರುತ್ತದೆ.