Home Crime ಮಹಿಳೆಯೊಬ್ಬರ ಮೊಬೈಲ್ ಗೆ ಲಿಂಕ್ ಕಳುಹಿಸಿ ಲಕ್ಷಾಂತರ ರೂ. ವಂಚನೆ…!!

ಮಹಿಳೆಯೊಬ್ಬರ ಮೊಬೈಲ್ ಗೆ ಲಿಂಕ್ ಕಳುಹಿಸಿ ಲಕ್ಷಾಂತರ ರೂ. ವಂಚನೆ…!!

ಉಡುಪಿ: ಮಹಿಳೆಯೊಬ್ಬರ ಮೊಬೈಲ್ ಗೆ ಲಿಂಕ್ ಮುಖಾಂತರ ಹೊಡಿಕೆ ನೆಪದಲ್ಲಿ ವಂಚಕರು ಮೆಸೇಜ್ ‌ಕಳುಹಿಸಿ ಲಕ್ಷಾಂತರ ರೂಪಾಯಿ ವಂಚನೆ ಮಾಡಿದ ಘಟನೆ ಸಂಭವಿಸಿದೆ.

ಸುಹಾಸಿನಿ ಎಂಬವರಿಗೆ ಲಕ್ಷಾಂತರ ರೂಪಾಯಿ ವಂಚನೆಯಾಗಿದೆ.

ಉಡುಪಿ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ವಂಚನೆ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಪ್ರಕರಣದ ಸಾರಂಶ : ಪಿರ್ಯಾದಿದಾರರಾದ ಸುಹಾಸಿನಿ ಇವರ ನಂಬ್ರಕ್ಕೆ ಯಾರೋ ಅಪರಿಚಿತರು ವಾಟ್ಯಾಪ್ ಮೂಲಕ ಮೆಸೇಜ್ ಮಾಡಿದ್ದು, ಪಿರ್ಯಾದಿದಾರರು ಕೆಲಸ ಹುಡುಕುವ ಬಗ್ಗೆ ಮಾಹಿತಿ ಪಡೆದಿದ್ದು ನಂತರದಲ್ಲಿ G432 ಗೇಟ್ ಗ್ರೂಪ್ ಎಂಬ ಟೆಲಿಗ್ರಾಂ ಗ್ರೂಪ್ ಗೆ ಸೇರುವಂತೆ ಲಿಂಕ್ ಕಳುಹಿಸಿಕೊಟ್ಟಿದ್ದಿದ್ದು ಅದನ್ನು ನಂಬಿದ ಪಿರ್ಯಾದಿದಾರರು ಒಟ್ಟು 11,61,256/- ರೂಪಾಯಿ ಹೂಡಿಕೆ ಮಾಡಿದ್ದು, ಪಿರ್ಯಾದಿದಾರರು ಹೂಡಿಕೆ ಮಾಡಿದ ಹಣವನ್ನಾಗಲಿ ಲಾಭಾಂಶವನ್ನಾಗಲಿ ನೀಡಿರುವುದಿಲ್ಲ.

ಈ ಬಗ್ಗೆ ಉಡುಪಿ ಸೆನ್‌ ಅಪರಾಧ ಪೊಲೀಸ್‌ ಠಾಣೆ ಅಪರಾಧ ಕ್ರಮಾಂಕ 35/2025 ಕಲಂ: 66 (C), 66(D) IT Act ಮತ್ತು ಕಲಂ: 318(4) BNS ರಂತೆ ಪ್ರಕರಣ ದಾಖಲಾಗಿರುತ್ತದೆ.