Home Crime ಉಡುಪಿ :16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ…!!

ಉಡುಪಿ :16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ…!!

ಉಡುಪಿ: ಮಾನ್ಯ ಪಿಸಿಜೆ & ಜೆಎಂಎಫ್‌ಸಿ ನ್ಯಾಯಾಲಯ, ಉಡುಪಿ ಇವರಲ್ಲಿ ವಿಚಾರಣೆಯಲ್ಲಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ, ಸುಮಾರು 16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರೆಂಟ್ ಆಸಾಮಿಯನ್ನು ಉಡುಪಿ ನಗರ ಪೊಲೀಸರು ಬಂಧಿಸಿದ್ದಾರೆ.

ಬಂಧಿತನನ್ನು ಭಟ್ಕಳ ತಾಲೂಕಿನ ಬೆಳಕೆ ನಿವಾಸಿಯಾದ ರಾಜು ಮೊಗೇರ ಎಂದು ಗುರುತಿಸಲಾಗಿದೆ. ಆರೋಪಿಯನ್ನು ಭಟ್ಕಳದಲ್ಲಿ ಪತ್ತೆಹಚ್ಚಿ, ಉಡುಪಿ ನಗರ ಪೊಲೀಸ್ ಠಾಣೆಯ ಸಿಬ್ಬಂದಿಗಳಾದ ಹೆಡ್ ಕಾಂಸ್ಟೇಬಲ್ ರಾಘವೇಂದ್ರ ಹಾಗೂ ಪೊಲೀಸ್ ಕಾಂಸ್ಟೇಬಲ್ ಭರಮಪ್ಪ ಅವರು ದಸ್ತಗಿರಿ ಮಾಡಿದ್ದಾರೆ.

ಬಂಧಿತ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಮಾನ್ಯ ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.