Home Crime ಕಾರ್ಕಳದಲ್ಲಿ ಅಕ್ರಮ ಗಣಿಗಾರಿಕೆ ದಾಳಿ : ಪ್ರಕರಣ ದಾಖಲು…!!

ಕಾರ್ಕಳದಲ್ಲಿ ಅಕ್ರಮ ಗಣಿಗಾರಿಕೆ ದಾಳಿ : ಪ್ರಕರಣ ದಾಖಲು…!!

 

ಕಾರ್ಕಳ, : ಕಾರ್ಕಳ ನಗರ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕರಾದ ಮುರಳೀಧರ ನಾಯ್ಕ್ ಅವರಿಗೆ ಸಿಬ್ಬಂದಿಯಿಂದ ಬಂದ ಖಚಿತ ಮಾಹಿತಿಯ ಮೇರೆಗೆ ಕಾರ್ಕಳ ತಾಲೂಕಿನ ಪಳ್ಳಿ ಗ್ರಾಮದ ಕೊಲ್ಲಜಾಲು ಪ್ರದೇಶದಲ್ಲಿ ಮಧ್ಯಾಹ್ನ 2 ಗಂಟೆಗೆ ದಾಳಿ ನಡೆಸಲಾಗಿದೆ.

ದಾಳಿಯ ವೇಳೆ ಆರೋಪಿಯು ಯಾವುದೇ ಮಾನ್ಯ ಪರವಾನಿಗೆ ಇಲ್ಲದೇ ಸರಕಾರಿ ಜಾಗದಲ್ಲಿ ಅಕ್ರಮವಾಗಿ ಗಣಿಗಾರಿಕೆ ನಡೆಸಿ, ಕೆಂಪು ಕಲ್ಲುಗಳನ್ನು ಕಳವು ಮಾಡಿ ಸಾಗಾಟ ಮಾಡುತ್ತಿದ್ದುದನ್ನು ಪತ್ತೆಹಚ್ಚಲಾಗಿದೆ.

ಈ ಸಂಬಂಧ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 18/2026 ರಂತೆ BNS 2023 ಕಲಂ 303(2) ಹಾಗೂ MMRD ಕಾಯ್ದೆಯ ಕಲಂ 4(1-A), 21(4) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದು, ಮುಂದಿನ ತನಿಖೆ ಮುಂದುವರಿದಿದೆ