ಬೆಂಗಳೂರು : ಕನ್ನಡ ಧ್ವಜಕ್ಕೆ ಅಧಿಕೃತ ಮಾನ್ಯತೆಗೆ ಆಗ್ರಹಿಸಿ ರಾಜ್ಯ ಸರಕಾರ ಕೇಂದ್ರಕ್ಕೆ ಮನವಿ ಮಾಡಿದೆ. ಈ ಬಗ್ಗೆ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ ಕೇಂದ್ರ ಸರಕಾರಕ್ಕೆ ಪತ್ರ ಬರೆದಿದ್ದಾರೆ. 2017 ರಲ್ಲೇ ಬಾವುಟ ಅಧಿಕೃತ ಕೋರಿ ಕೇಂದ್ರಕ್ಕೆ ಸಿದ್ದರಾಮಯ್ಯ ಸರಕಾರ ಮನವಿ ಸಲ್ಲಿಸಿತ್ತು. ಇದೀಗ ಮತ್ತೊಮ್ಮೆ ಪತ್ರ ಬರೆಯುವ ಮೂಲಕ ಕೇಂದ್ರದ ಮೇಲೆ ಒತ್ತಡ ಹೇರಿದೆ.
ಈ ವಿಚಾರವಾಗಿ ಪ್ರತಿಕ್ರಿಯಿಸಿದ ಸಚಿವ ಶಿವರಾಜ ತಂಗಡಗಿ, ಕನ್ನಡಕ್ಕೆ ಶಾಸ್ತ್ರೀಯ ಸ್ಥಾನಮಾನ ಬರೀ ಹೆಸರಿಗೆ ಮಾತ್ರ ಇದೆ. ಈಗಿರುವ ಕನ್ನಡದ ಬಾವುಟ ಅಧಿಕೃತ ಅಲ್ಲ. ಅದೇ ಬಾವುಟವನ್ನು ಅಧಿಕೃತಗೊಳಿಸಿ ಎಂದು ಕೇಂದ್ರಕ್ಕೆ ಮನವಿ ಮಾಡಿದ್ದೇವೆ. ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಶೋಭಾ ಕರಂದ್ಲಾಜೆ ಮಾತಾನಾಡಿ ಕೇಂದ್ರದಿಂದ ಕನ್ನಡ ಬಾವುಟಕ್ಕೆ ಒಪ್ಪಿಗೆ ಕೊಡಿಸಲಿ. ಶಾಸ್ತ್ರೀಯ ಸ್ಥಾನಮಾನ ವಿಚಾರದಲ್ಲಿ ಅನುದಾನ ಕೊಡಿಸಲಿ. ಜುಲೈ ಅಂತ್ಯದೊಳೆಗೆ ನಿಯೋಗದ ಜತೆ ಕೇಂದ್ರದ ಮಂತ್ರಿಗಳನ್ನು ಭೇಟಿ ಮಾಡಿ ಅನುದಾನಕ್ಕೆ ಮನವಿ ಮಾಡುತ್ತೇವೆ ಎಂದಿದ್ದಾರೆ.