ಹೊನ್ನಾವರ: ಅಪ್ಸರಕೊಂಡ ತಿರುವಿನ ಸಮೀಪದ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ದ್ವಿಚಕ್ರ ವಾಹನಕ್ಕೆ ಅಪರಿಚಿತ ವಾಹನವೊಂದು ಡಿಕ್ಕಿಯಾಗಿ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಗುರುವಾರ ನಡೆದಿದೆ.
ಮೃತ ಸವಾರ ಹೊನ್ನಾವರ ತಾಲೂಕಿನ ಕೆಳಗಿನ ಇಡಗುಂಜಿ ನಿವಾಸಿ ಕಿರಣ ಬಾಲಚಂದ್ರ ನಾಯ್ಕ (25) ಎಂದು ತಿಳಿದು ಬಂದಿದೆ.
ಈತ ಹೊನ್ನಾವರದಲ್ಲಿರುವ ತನ್ನ ಸ್ನೇಹಿತನ ತಾಯಿಗೆ ಅನಾರೋಗ್ಯ ಕಾಣಿಸಿಕೊಂಡ ಹಿನ್ನೆಲೆ ಆತನ ಮೆನೆಗೆ ತೆರಳುತ್ತಿದ್ದ ವೇಳೆ ಅಪರಿಚಿತ ವಾಹನ ಡಿಕ್ಕಿಯಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.
ಘಟನಾ ಸ್ಥಳಕ್ಕೆ ಹೊನ್ನಾವರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.





