ಕುಂದಾಪುರ :ಎಸ್.ಪ್ರಕಾಶ್ಚಂದ್ರ ಶೆಟ್ಟಿ ಅವರು ಎಲ್ಲ ಕ್ಷೇತ್ರದಲ್ಲೂ ತನ್ನ ಛಾಪು ಮೂಡಿಸಿದ್ದಾರೆ. ಸ್ವಾಭಿಮಾನಕ್ಕೆ ಧಕ್ಕೆ ಬಂದಾಗ ಸಟೆದು ನಿಲ್ಲುವ, ನಿಷ್ಟೂರವಾದಿ ವ್ಯಕ್ತಿತ್ವ ಇವರದ್ದು. ಹೈನುಗಾರಿಕೆ, ಸಹಕಾರ, ಕೃಷಿ ಕ್ಷೇತ್ರದಲ್ಲಿ ಇವರ ಸಾಧನೆಗಳು ಮಾದರಿಯಾಗಿದೆ ಎಂದು ದ.ಕ ಜಿಲ್ಲಾ ಸಹಕಾರಿ ಹಾಲು ಒಕ್ಕೂಟದ ಅಧ್ಯಕ್ಷರಾದ ರವಿರಾಜ ಹೆಗ್ಡೆ ಹೇಳಿದರು.
ಅವಿಭಜಿತ ಕುಂದಾಪುರ ತಾಲೂಕಿನ ಕೃಷಿಪತ್ತಿನ ಸಹಕಾರಿ ಸಂಘಗಳ ವತಿಯಿಂದ 2024-25ನೇ ಸಾಲಿನ ಕರ್ನಾಟಕ ಸರ್ಕಾರ ಕೊಡಮಾಡುವ ‘ಸಹಕಾರ ರತ್ನ’ ಪ್ರಶಸ್ತಿ ಪುರಸ್ಕøತ ಖಂಬದಕೋಣೆ ರೈತರ ಸೇವಾ ಸಹಕಾರ ಸಂಘದ ಅಧ್ಯಕ್ಷರಾದ ಎಸ್.ಪ್ರಕಾಶ್ಚಂದ್ರ ಶೆಟ್ಟಿ ಅವರಿಗೆ ಜು.20ರಂದು ಕುಂದಾಪುರದ ಬಂಟರ ಯಾನೆ ನಾಡವರ ಸಂಘದ ಆರ್.ಎನ್.ಶೆಟ್ಟಿ ಸಭಾಭವನದಲ್ಲಿ ಆಯೋಜಿಸಲಾದ ಅಭಿನಂದನಾ ಕಾರ್ಯಕ್ರಮದಲ್ಲಿ ಸನ್ಮಾನ ನೆರವೇರಿಸಿ ಮಾತನಾಡಿದರು.
ದಕ ಒಕ್ಕೂಟಕ್ಕೆ ಅತೀ ಹೆಚ್ಚು ಹಾಲು ಸರಬರಾಜು ಮಾಡುವ ಹೈನುಗಾರರಾಗಿ, 10 ಸಾವಿರ ಲೀಟರ್ ಸಾಮಾಥ್ರ್ಯದ ಸಾಂಧ್ರಶೀತಲಿಕರಣ ಘಟಕವನ್ನು ಸ್ಥಾಪಿಸಿ ಹೈನುಗಾರನ್ನು ಉತ್ತೇಜಿಸಿದ್ದಾರೆ. ಸಹಕಾರ, ಹೈನೋದ್ಯಮ, ಕೃಷಿ ಕ್ಷೇತ್ರದಲ್ಲಿ ಮಹತ್ತರವಾದ ಬದಲಾವಣೆಗೆ ಇವರು ಕಾರಣರಾಗಿದ್ದಾರೆ ಎಂದರು.
ಸಮಾರಂಭದ ಅಧ್ಯಕ್ಷತೆಯನ್ನು ದ.ಕ. ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನ ನಿರ್ದೇಶಕರಾದ ಎಂ.ಮಹೇಶ ಹೆಗ್ಡೆ ವಹಿಸಿದ್ದರು.ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದ ಮಹತ್ವಕಾಂಕ್ಷೆಯ ಯೋಜನೆಯಾದ ಬಹುಕೋಟಿ ವೆಚ್ಚದ ಅ್ಯಗ್ರಿ ಮಾಲ್ ನಿರ್ಮಾಣ ಹಂತದಲ್ಲಿದೆ. ಸಹಕಾರ ಕ್ಷೇತ್ರದಲ್ಲಿ ಸರಿಯಾದ ನಾಯಕತ್ವ ಇದ್ದರೆ ಖಂಡಿತಾ ಯಶಸ್ಸು ಸಾಧ್ಯ, ಸಹಕಾರಿಗಳು ಸಶಕ್ತರಾಗಬೇಕು ಎಂದರು.
ಮುಖ್ಯ ಅತಿಥಿಯಾಗಿ ಭಾಗವಹಿಸಿದ ಕೊಲ್ಲೂರು ಶ್ರೀ ಮೂಕಾಂಭಿಕಾ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಬಾಬು ಶೆಟ್ಟಿ ಶುಭ ಹಾರೈಸಿದರು.
ಕೃಷಿ ಪತ್ತಿನ ಸಹಕಾರ ಸಂಘಗಳ ಪರವಾಗಿ ಕೋಟೇಶ್ವರ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾದ ಕೆದೂರು ಸದಾನಂದ ಶೆಟ್ಟಿ ಹಾಗೂ ವಂಡ್ಸೆ ವ್ಯವಸಾಯಿಕ ಸಹಕಾರಿ ಸಂಘದ ಅಧ್ಯಕ್ಷ ಎನ್.ಮಂಜಯ್ಯ ಶೆಟ್ಟಿ ಮಾತನಾಡಿದರು.
ಈ ಸಂದರ್ಭದಲ್ಲಿ 23 ಕೃಷಿ ಪತ್ತಿನ ಸಹಕಾರ ಸಂಘಗಳ ಅಧ್ಯಕ್ಷರು ಉಪಸ್ಥಿತರಿದ್ದರು.
ಎಸ್.ಪ್ರಕಾಶ್ಚಂದ್ರ ಶೆಟ್ಟಿ ಹಾಗೂ ಅವರ ಪತ್ನಿ ಗೀತಾ ಶೆಟ್ಟಿಯವರನ್ನು ಅದ್ದೂರಿಯಾಗಿ ಸನ್ಮಾನಿಸಲಾಯಿತು. ನೂರಾರು ಸಹಕಾರಿಗಳು, ಸಹಕಾರಿ ನೌಕರರನ್ನು ಪ್ರಕಾಶ್ಚಂದ್ರ ಶೆಟ್ಟಿ ಅವರನ್ನು ಅಭಿನಂದಿಸಿದರು.
ಅವಿಭಜಿತ ಕುಂದಾಪುರ ತಾಲೂಕಿನ ಕೃಷಿಪತ್ತಿನ ಸಹಕಾರಿ ಸಂಘಗಳ ನೌಕರರ ಒಕ್ಕೂಟದ ಅಧ್ಯಕ್ಷ ವಿಶ್ವೇಶ್ವರ ಐತಾಳ್ ಸ್ವಾಗತಿಸಿ, ಪ್ರಾಸ್ತಾವಿಕ ಮಾತುಗಳನ್ನಾಡಿದರು. ಕಾರ್ಯದರ್ಶಿ ಕೀರ್ತಿಕುಮಾರ್ ಶೆಟ್ಟಿ ವಂದಿಸಿದರು. ಆಕಾಶವಾಣಿ ಕಲಾವಿದ ಡಾ.ಗಣೇಶ ಗಂಗೊಳ್ಳಿ ಪ್ರಾರ್ಥನೆ, ಸೋಬಾನೆ ಹಾಡು ಹಾಡಿದರು. ಪತ್ರಕರ್ತ ಸುಬ್ರಹ್ಮಣ್ಯ ಪಡುಕೋಣೆ ಕಾರ್ಯಕ್ರಮ ನಿರ್ವಹಿಸಿದರು.
