ಉಡುಪಿ: ಇಂದ್ರಾಣಿ ಶ್ರೀ ಮುಖ್ಯಪ್ರಾಣ ದೇವರು ಹಾಗೂ ಶ್ರೀ ನಾಗ ದೇವರ ಗುಡಿಯಲ್ಲಿ ಪುನಃ ಪ್ರತಿಷ್ಠೆ ಹಾಗೂ ಬ್ರಹ್ಮ ಕಲಶೋತ್ಸವ ಕಾರ್ಯಕ್ರಮಗಳು ಏಪ್ರಿಲ್ 3, 2026 ರಿಂದ ಏಪ್ರಿಲ್ 7, 2026ರವರೆಗೆ ನಡೆಯಲಿವೆ.
ಈ ಮಹೋತ್ಸವದ ಅಂಗವಾಗಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು, ವೇದಮಂತ್ರೋಚ್ಚಾರಣೆಯೊಂದಿಗೆ ಪೂಜೆಗಳು, ಹೋಮ-ಹವನಗಳು ಮತ್ತು ವಿಶೇಷ ಆಚರಣೆಗಳು ನೆರವೇರಲಿವೆ. ಭಕ್ತರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ನಿರೀಕ್ಷೆಯಿದೆ
ಏಪ್ರಿಲ್ 4ರಂದು ಬೆಳಿಗ್ಗೆ ಗಣಹೋಮ, ಧಾರ್ಮಿಕ ಕಾರ್ಯಗಳು ಹಾಗೂ ಸಂಜೆ ಭಜನಾ ಕಾರ್ಯಕ್ರಮಗಳು ನಡೆಯಲಿವೆ.
ಏಪ್ರಿಲ್ 5ರಂದು ದೇವರಿಗೆ ಬ್ರಹ್ಮಕಲಶಾಭಿಷೇಕ, ವಿಶೇಷ ಪೂಜೆಗಳು ಮತ್ತು ಭಕ್ತರಿಗೆ ಅನ್ನಸಂತರ್ಪಣೆ ನಡೆಯಲಿದೆ. ಏಪ್ರಿಲ್ 6ರಂದು ಮೊಕ್ತೇಶ್ವರ ಸಂಗಮ, ವಿವಿಧ ಧಾರ್ಮಿಕ ವಿಧಿವಿಧಾನಗಳು ನೆರವೇರಲಿವೆ.
ಏಪ್ರಿಲ್ 7ರಂದು ಮಂಗಳವಾರ ಶ್ರೀ ನಾಗದೇವರ ಪುನಃ ಪ್ರತಿಷ್ಠಾ ಕಾರ್ಯಕ್ರಮ ಹಾಗೂ ವಿಶೇಷ ಪೂಜೆಗಳು ನೆರವೇರಲಿದ್ದು, ಮಧ್ಯಾಹ್ನ ಮಹಾಪೂಜೆ ಮತ್ತು ಅನ್ನಸಂತರ್ಪಣೆ ನಡೆಯಲಿದೆ. ಸಂಜೆ ಯಕ್ಷಗಾನ ಕಾರ್ಯಕ್ರಮವೂ ಆಯೋಜಿಸಲಾಗಿದೆ.
ಪ್ರತಿದಿನ ವಿಶೇಷ ಪೂಜೆಗಳು, ಹೋಮಗಳು, ಧಾರ್ಮಿಕ ಕಾರ್ಯಕ್ರಮಗಳು ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.
ಈ ಧಾರ್ಮಿಕ ಮಹೋತ್ಸವದಲ್ಲಿ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ದೇವರ ಕೃಪೆಗೆ ಪಾತ್ರರಾಗುವಂತೆ ದೇವಸ್ಥಾನ ಆಡಳಿತ ಮಂಡಳಿ ಮನವಿ ಮಾಡಿದೆ.
ಇದಕ್ಕೂ ಪೂರ್ವಭಾವಿಯಾಗಿ ಏಪ್ರಿಲ್ 1, 2026ರಂದು ಮಧ್ಯಾಹ್ನ 3.00 ಗಂಟೆಗೆ ಹೊರೆಕಾಣಿಕೆ ಶೋಭಾಯಾತ್ರೆ ವಿಜೃಂಭಣೆಯಿಂದ ನಡೆಯಿತು.
ಕಾರ್ಯಕ್ರಮದ ಯಶಸ್ಸಿಗಾಗಿ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಆಶೀರ್ವಾದ ಪಡೆಯುವಂತೆ ದೇವಸ್ಥಾನದ ಆಡಳಿತ ಮಂಡಳಿ ವತಿಯಿಂದ ವಿನಂತಿಸಲಾಗಿದೆ.






