Home Latest ಉಚ್ಚಿಲ ಮಹಾಲಿಂಗೇಶ್ವರ ದೇವಸ್ಥಾನ ಬಳಿ ತಡೆಗೋಡೆ ಕಾಮಗಾರಿ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಗುದ್ದಲಿ...

ಉಚ್ಚಿಲ ಮಹಾಲಿಂಗೇಶ್ವರ ದೇವಸ್ಥಾನ ಬಳಿ ತಡೆಗೋಡೆ ಕಾಮಗಾರಿ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಗುದ್ದಲಿ ಪೂಜೆ…!!

ಕಾಪು : ಉಚ್ಚಿಲ ಮಹಾಲಿಂಗೇಶ್ವರ ದೇವಸ್ಥಾನದ ಬಳಿಯ ತಡೆಗೋಡೆ ನಿರ್ಮಾಣಕ್ಕೆ ದೇವಸ್ಥಾನದಿಂದ 14 ಲಕ್ಷ ರೂಪಾಯಿ ಅನುದಾನ ಕಾಯ್ದಿರಿಸಿದ್ದು ಇದರ ಗುದ್ದಲಿ ಪೂಜೆಯನ್ನು ಇಂದು ದಿನಾಂಕ 03-04-2026 ರಂದು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ನೆರವೇರಿಸಿದರು.

ಈ ಸಂದರ್ಭದಲ್ಲಿ ಉಚ್ಚಿಲ ಮಹಾಲಿಂಗೇಶ್ವರ ದೇವಸ್ಥಾನದ ಮೆನೇಜರ್ ಸಂತೋಷ್, ಗಂಗಾಧರ್ ಸುವರ್ಣ, ಬಡಾ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಶಿವಕುಮಾರ್ ಮೆಂಡನ್, ಉಚ್ಚಿಲ ಮಹಾಶಕ್ತಿ ಅಧ್ಯಕ್ಷರಾದ ಚಂದ್ರಶೇಖರ್ ಕೋಟ್ಯಾನ್, ಚಂದ್ರಶೇಖರ್ ಶೆಟ್ಟಿ, ಕಮಲಾಕ್ಷ ಶೆಣೈ , ಬಡಾ ಗ್ರಾಮ ಪಂಚಾಯತ್ ಮಾಜಿ ಸದಸ್ಯರಾದ ಇಂದಿರಾ ಶೆಟ್ಟಿ, ವಸಂತ ದೇವಾಡಿಗ, ಸುಧಾಕರ್ ಪೂಜಾರಿ, ಸುಧೀರ್ ಶೆಟ್ಟಿ ಉಪಸ್ಥಿತರಿದ್ದರು.