ಕಡಬ: ಅಕ್ರಮ ಜಾನುವಾರು ಸಾಗಾಟವನ್ನು ಪತ್ತೆ ಹಚ್ಚಿ, ಓರ್ವ ಆರೋಪಿಯನ್ನು ಕಡಬ ಠಾಣಾ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬಂಧಿತ ಆರೋಪಿಯನ್ನು ಹೊಸೂರು ಮೂಲದ ಅಕ್ರಮ್ ಪಾಷಾ ಎಂದು ಗುರುತಿಸಲಾಗಿದೆ.
ಹಾಸನದಿಂದ ಕೇರಳ ಕಡೆಗೆ ಕಂಟೇನರ್ ವಾಹನದಲ್ಲಿ ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿರುವ ಬಗ್ಗೆ ದೊರೆತ ಖಚಿತ ಮಾಹಿತಿಯ ಮೇರೆಗೆ ಕಡಬ ಪೊಲೀಸರು ಶುಕ್ರವಾರ ಬೆಳಗಿನ ಜಾವ ಕಡಬದ ಕನ್ವರೆ ಎಂಬಲ್ಲಿ ವಾಹನವನ್ನು ತಡೆದು ನಿಲ್ಲಿಸಿ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.
ಈ ಸಂದರ್ಭ ಕಂಟೇನರ್ ನಲ್ಲಿ ಸುಮಾರು 18 ಜಾನುವಾರುಗಳನ್ನು ಅಕ್ರಮವಾಗಿ ಸಾಗಿಸುತ್ತಿರುವುದು ಬೆಳಕಿಗೆ ಬಂದಿದೆ.
ಘಟನಾ ಸಂಬಂಧ ಕಡಬ ಪೊಲೀಸರು ಓರ್ವನನ್ನು ಬಂಧಿಸಿದ್ದು, ಇನ್ನೋರ್ವ ಪರಾರಿಯಾಗಿದ್ದಾನೆ.





