ಮಂಗಳೂರು : ನಿಷೇಧಿತ ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ಆರೋಪಿಯನ್ನು ದೇರಳಕಟ್ಟೆ ಬಳಿ ಕೊಣಾಜೆ ಪೊಲೀಸರು ಬಂಧಿಸಿದ್ದಾರೆ.
ಬೋಳಿಯಾರ್ ನಿವಾಸಿ ಮಹಮ್ಮದ್ ಆರೀಫ್ ಬಂಧಿತ ಆರೋಪಿ. ದೇರಳಕಟ್ಟೆಯ ಖಾಸಗಿ ಆಸ್ಪತ್ರೆ ಎದುರುಗಡೆ ಮೈದಾನದಲ್ಲಿ ನಿಷೇಧಿತ ಎಂಡಿಎಂಎ ಮಾರಾಟ ಮಾಡುವ ಖಚಿತ ಮಾಹಿತಿ ಪಡೆದುಕೊಂಡ ಕೊಣಾಜೆ ಎಸ್ ಐ ನಾಗರಾಜ್ ನೇತೃತ್ವದಲ್ಲಿ ದಾಳಿ ನಡೆಸಿ ಆರೋಪಿಯನ್ನು ಬಂಧಿಸಲಾಗಿದೆ.
ಈ ಕುರಿತು ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ





