ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಸಮೀಪ ಕೆಎಸ್ಸಾರ್ಟಿಸಿ ಬಸ್ಸಿನಲ್ಲಿ ಕಾಲೇಜ್ ವಿದ್ಯಾರ್ಥಿನಿಯೊಂದಿಗೆ ಅನುಚಿತವಾಗಿ ವರ್ತಿಸಿದ ಪ್ರಯಾಣಿಕನೊಬ್ಬನನ್ನು ಪೊಲೀಸರು ಬಂಧಿಸಿರುವ ಘಟನೆ ಸಂಭವಿಸಿದೆ.
ಬಂಧಿತ ಆರೋಪಿಯನ್ನು ಮಂಗಳೂರಿನ ತೌಹೀದ್ ಎಂದು ಗುರುತಿಸಲಾಗಿದೆ.
ಮಂಗಳೂರಿನಿಂದ ಪುತ್ತೂರು ಕಡೆಗೆ ತೆರಳುತ್ತಿದ್ದ ಬಸ್ಸು ಸಂಜೆ ಸುಮಾರು 6:30 ಗಂಟೆಗೆ ಬಂಟ್ವಾಳ ತಾಲೂಕಿನ ಮಾಣಿ ಬಳಿ ತಲುಪಿದಾಗ ಆರೋಪಿಯು ತನ್ನ ಪಕ್ಕದಲ್ಲಿ ಕುಳಿತಿದ್ದ ವಿದ್ಯಾರ್ಥಿನಿ ಜೊತೆಗೆ ಅನುಚಿತವಾಗಿ ವರ್ತಿಸಿದ್ದಾನೆ ಎನ್ನಲಾಗಿದೆ. ಈ ವಿಚಾರವನ್ನು ವಿದ್ಯಾರ್ಥಿನಿ ತಂದೆಗೆ ಪೋನ್ ಮುಖಾಂತರ ತಿಳಿಸಿದ್ದಾಳೆ. ನಂತರ ಆಕೆಯ ತಂದೆ ಬಂದು ಆತನನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ.
ಪುತ್ತೂರು ಪೊಲೀಸರು ಬಂಧಿಸಿ ಪ್ರಕರಣ ದಾಖಲಿಸಿಕೊಂಡು, ತನಿಖೆ ನಡೆಸುತ್ತಿದ್ದಾರೆ.
