Home Crime ಕಾರ್ಕಳ : ಗಣೇಶ್ ಪೂಜಾರಿ ಗೂಂಡಾ ಕಾಯ್ದೆಯಡಿ ಬಂಧನ…!!

ಕಾರ್ಕಳ : ಗಣೇಶ್ ಪೂಜಾರಿ ಗೂಂಡಾ ಕಾಯ್ದೆಯಡಿ ಬಂಧನ…!!

ಉಡುಪಿ ಜಿಲ್ಲೆ ಕಾರ್ಕಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯ  ಗಣೇಶ್ ಪೂಜಾರಿ (48) ಅವರನ್ನು ಗೂಂಡಾ ಕಾಯ್ದೆಯಡಿ ಬಂಧಿಸಲಾಗಿದೆ.

ಸದ್ಗುಣ ನಿವಾಸ, ಕೌಡೂರು ಗ್ರಾಮ, ಕಾರ್ಕಳ ತಾಲೂಕು ನಿವಾಸಿಯಾಗಿರುವ ಗಣೇಶ್ ಪೂಜಾರಿ ವಿರುದ್ಧ ಗಂಭೀರ ಅಪರಾಧ ಪ್ರಕರಣಗಳ ಹಿನ್ನೆಲೆ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕರ ವರದಿಯ ಮೇರೆಗೆ, ಉಡುಪಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿಗಳು ದಿನಾಂಕ 04-04-2026ರಂದು ಬಂಧನ ಆದೇಶ ಹೊರಡಿಸಿದ್ದಾರೆ.

ಗಣೇಶ್ ಪೂಜಾರಿ ವಿರುದ್ಧ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಒಟ್ಟು 11 ಪ್ರಕರಣಗಳು ದಾಖಲಾಗಿದ್ದು, ಅವುಗಳಲ್ಲಿ ಕೊಲೆಯತ್ನ 4, ದರೋಡೆ 1, ಹಲ್ಲೆ 3, ಅಕ್ರಮ ಕೂಟ 1, ಜೂಜಾಟ 1 ಮತ್ತು ಇತರ 1 ಪ್ರಕರಣಗಳು ಸೇರಿವೆ. ಈ ಪ್ರಕರಣಗಳ ಪೈಕಿ 1 ಪ್ರಕರಣದಲ್ಲಿ ಶಿಕ್ಷೆ ವಿಧಿಸಲಾಗಿದ್ದು, 7 ಪ್ರಕರಣಗಳಲ್ಲಿ ಖುಲಾಸೆ ದೊರೆತಿದೆ. 1 ಪ್ರಕರಣ ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿದ್ದು, ಉಳಿದ 2 ಪ್ರಕರಣಗಳು ತನಿಖೆಯ ಹಂತದಲ್ಲಿವೆ.

ಬಂಧಿತ ಆರೋಪಿಯನ್ನು ಕಲಬುರ್ಗಿ ಕೇಂದ್ರ ಕಾರಾಗೃಹದಲ್ಲಿ ಇರಿಸಲು ಅಧಿಕಾರಿಗಳು ಆದೇಶಿಸಿದ್ದಾರೆ.