ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ನಗರ ಠಾಣಾ ವ್ಯಾಪ್ತಿಯ ಮೇಲ್ಕಾರ್ ಬಸ್ ನಿಲ್ಲಾಣದ ಬಳಿ ದಿನಾಂಕ: 10.11.2020 ರಂದು ಕಾರಿನಲ್ಲಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದಾಗ, ಆಗಿನ ಬಂಟ್ವಾಳ ನಗರ ಠಾಣಾ ಪೊಲೀಸ್ ನಿರೀಕ್ಷಕರಾದ ಚೆಲುವರಾಜ್ ರವರು ಧಾಳಿ ನಡೆಸಿ ರೂ 49,000/- ಮೌಲ್ಯದ 1.480 ಕಿ.ಗ್ರಾಂ ಗಾಂಜಾ ಹಾಗೂ ಇಬ್ಬರು ಆರೋಪಿಗಳನ್ನು ದಸ್ತಗಿರಿ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಬಂಟ್ವಾಳ ನಗರ ಠಾಣೆಯಲ್ಲಿ ಅಕ್ರ 126/2020ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿ, ಆಗಿನ ಬಂಟ್ವಾಳ ವೃತ್ತ ನಿರೀಕ್ಷಕರಾಗಿದ್ದ ಟಿ. ಡಿ. ನಾಗರಾಜ್ ರವರು ತನಿಖೆ ಪೂರ್ಣಗೊಳಿಸಿ ಮಾನ್ಯ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿಯನ್ನು ಸಲ್ಲಿಸಿದ್ದರು.
ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯವು, ಆರೋಪಿತನಾದ ಮಂಗಳೂರು ಬಂದರು ನಿವಾಸಿ ಟಿ.ಪಿ ಫಾರೂಕ್ ಎಂಬಾತನಿಗೆ ಮಂಗಳೂರಿನ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಶ್ರೀ ಬಸವರಾಜ್ ರವರು ದಿನಾಂಕ: 4-4-2026 ರಂದು ಆರೋಪಿಗೆ 7 ವರ್ಷ ಶಿಕ್ಷೆ ಮತ್ತು 70,000 ಸಾವಿರ ದಂಡ ವಿಧಿಸಿ ಆದೇಶಿಸಿರುತ್ತಾರೆ.
ಸರಕಾರದ ಪರವಾಗಿ ಸರಕಾರಿ ಅಭಿಯೋಜಕರಾದ ಶ್ರೀಮತಿ ಜೂಡಿತಾರವರು ಸಮರ್ಥವಾಗಿ ವಾದ ಮಂಡಿಸಿರುತ್ತಾರೆ.





