ಕೋಟ: ಉಡುಪಿ ಜಿಲ್ಲೆಯ ಕೋಟ ಸಮೀಪ ವ್ಯಕ್ತಿಯೊಬ್ಬರು ಕ್ಯಾನ್ಸರ್ ಕಾಯಿಲೆಯಿಂದ ಮನನೊಂದು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಸಂಭವಿಸಿದೆ.
ಆತ್ಮಹತ್ಯೆ ಮಾಡಿಕೊಂಡವರು ಭೋಜರಾಜ ಸಮಗಾರ ಎಂದು ತಿಳಿದು ಬಂದಿದೆ.
ಈ ಘಟನೆ ಸಂಬಂಧಿಸಿದಂತೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಕರಣದ ವಿವರ: ಪಿರ್ಯಾದಿ ಗಣೇಶ್ ಪ್ರಸಾದ್ (37) ಶಿರಿಯಾರ ಗ್ರಾಮ, ಬ್ರಹ್ಮಾವರ ತಾಲೂಕುಇವರ ತಂದೆ ಭೋಜರಾಜ ಸಮಗಾರ ಪ್ರಾಯ 67 ವರ್ಷ ರವರು ಯಾವಾಗಲೂ ಹುಷಾರಿಲ್ಲದೆ ಮನೆಯಲ್ಲಿಯೇ ಇರುತ್ತಿದ್ದರು .ಅವರು ಗಂಟಲು ಕ್ಯಾನ್ಸರ್ ನಿಂದ ಬಳಲುತ್ತಿದ್ದು ಈ ಬಗ್ಗೆ ದಿನಾಂಕ: 03.04.2026 ರಂದು ಮಣಿಪಾಲ ಕೆ ಎಮ್ ಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಮನೆಗೆ ಕರೆದುಕೊಂಡು ಬಂದಿರುವುದಾಗಿದೆ . ಗಂಟಲು ಕ್ಯಾನ್ಸರ್ ನಿಂದ ತೀವ್ರ ಮನನೊಂದಿದ್ದು ದಿನಾಂಕ 04.04.2026 ರಂದು ಬಾವಿಗೆ ಹಾರಿದ್ದು 03:30 ಗಂಟೆಗೆ ಅವರನ್ನು ಕೂಡಲೇ ಮೇಲಕ್ಕೆ ಎತ್ತಿ ಅಂಬುಲೆನ್ಸ್ ನಲ್ಲಿ ಬ್ರಹ್ಮಾವರ ಮಹೇಶ್ ಆಸ್ಪತ್ರೆಗೆ ಕರೆದುಕೊಂಡು ಹೋದ್ದಲ್ಲಿ ಅದಾಗಲೇ ಮೃತಪಟ್ಟಿರುವುದಾಗಿ ತಿಳಿಸಿರುತ್ತಾರೆ.
ಈ ಬಗ್ಗೆ ಕೋಟ ಪೊಲೀಸ್ ಠಾಣೆ ಯುಡಿಆರ್ ಕ್ರಮಾಂಕ:12/2026 ಕಲಂ 194 BNSS ರಂತೆ ಪ್ರಕರಣ ದಾಖಲಾಗಿರುತ್ತದೆ.





