Home Karavali Karnataka ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ : ರೆಡ್ ಅಲರ್ಟ್ ಘೋಷಣೆ…!!

ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ : ರೆಡ್ ಅಲರ್ಟ್ ಘೋಷಣೆ…!!

ಬೆಂಗಳೂರು: ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಭಾರಿ ಮಳೆಯಾಗಲಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ. ಇಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಿಗೆ ರೆಡ್‌ ಅಲರ್ಟ್ ಘೋಷಿಸಲಾಗಿದೆ.

ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್, ಮೈಸೂರು, ದಾವಣಗೆರೆ, ಯಾದಗಿರಿ, ವಿಜಯನಗರ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಬೀದ‌ರ್, ಬೆಳಗಾವಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.