ಕಾಪು : ಕಾಪು ತಾಲೂಕಿನ ನಡ್ಸಾಲು ಗ್ರಾಮದ ಶಬ್ರೀನ (25) ಅವರು 2024ರ ಮೇ ತಿಂಗಳಲ್ಲಿ ಮೂಡಬೆಟ್ಟು ಗ್ರಾಮದ ಯಾಸೀರ್ ಸಾಬನ್ ಅಲಿ ಅವರೊಂದಿಗೆ ವಿವಾಹವಾಗಿದ್ದು, ಮದುವೆಯ ನಂತರ ಗಂಡ ಹಾಗೂ ಅವರ ಕುಟುಂಬದವರು ಮಾನಸಿಕ ಹಾಗೂ ದೈಹಿಕ ಕಿರುಕುಳ ನೀಡುತ್ತಿದ್ದರೆಂದು ಆರೋಪಿಸಿದ್ದಾರೆ.
ದೂರಿನ ಪ್ರಕಾರ, ಯಾಸೀರ್ ಸಾಬನ್ ಅಲಿ ಅವರು ತಂದೆ ಸಾಬನ್ ಸಾಹೇಬ್ ಹಾಗೂ ತಾಯಿ ಅವ್ವಮ್ಮ ಅವರೊಂದಿಗೆ ಸೇರಿ ಪಿರ್ಯಾದುದಾರರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಜೀವ ಬೆದರಿಕೆ ಹಾಕಿ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಅಲ್ಲದೆ, 5½ ತಿಂಗಳ ಮಗುವಿನೊಂದಿಗೆ ಮನೆಯಿಂದ ಹೊರಗೆ ಹಾಕಿ ಪಡುಬಿದ್ರಿ ಮಾರ್ಗ ಮಧ್ಯದಲ್ಲಿ ಬಿಟ್ಟುಹೋಗಿರುವುದಾಗಿ ದೂರಿನಲ್ಲಿ ತಿಳಿಸಲಾಗಿದೆ.
ಹೆಚ್ಚಿನ ಹಣವನ್ನು ತರಲು ಒತ್ತಾಯಿಸಿ ವರದಕ್ಷಿಣೆ ಕಿರುಕುಳ ನೀಡಿರುವುದಾಗಿ ಆರೋಪಿಸಲಾಗಿದ್ದು, ಈ ಸಂಬಂಧ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




