ಉಡುಪಿ: ಜಿಲ್ಲೆಯ ಅಮಾಸೆಬೈಲು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮ ಜಾನುವಾರು ಸಾಗಾಟ ಪ್ರಕರಣವನ್ನು ಪೊಲೀಸರು ಬಯಲಿಗೆಳೆದಿದ್ದು, ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.
ದಿನಾಂಕ 05 ಏಪ್ರಿಲ್ 2026 ರಂದು ಬೆಳಗ್ಗೆ ಸುಮಾರು 5 ಗಂಟೆಯ ವೇಳೆಗೆ ಹೊಸಂಗಡಿ ಚೆಕ್ ಪೋಸ್ಟ್‌ನಲ್ಲಿ ತಪಾಸಣೆ ನಡೆಸುತ್ತಿದ್ದ ವೇಳೆ, ಹುಲಿಕಲ್ ಘಾಟಿ ಕಡೆಯಿಂದ ಬರುತ್ತಿದ್ದ ವಾಹನವನ್ನು ತಡೆದು ಪರಿಶೀಲಿಸಲಾಯಿತು. ಈ ವೇಳೆ ವಾಹನದಲ್ಲಿ ಎತ್ತುಗಳನ್ನು ಹಿಂಸಾತ್ಮಕವಾಗಿ ಕಟ್ಟಿ ಸಾಗಿಸಲಾಗುತ್ತಿದ್ದು, ಅವುಗಳನ್ನು ವಧೆಗಾಗಿ ಕೊಂಡೊಯ್ಯಲಾಗುತ್ತಿದೆ ಎಂಬುದು ವಿಚಾರಣೆ ವೇಳೆ ತಿಳಿದುಬಂದಿದೆ.
ಜಾನುವಾರುಗಳ ಅಂದಾಜು ಮೌಲ್ಯ ₹1 ಲಕ್ಷವಾಗಿದ್ದು, ವಾಹನದ ಮೌಲ್ಯ ಸುಮಾರು ₹4 ಲಕ್ಷ ಎಂದು ತಿಳಿದುಬಂದಿದೆ. ಇದೇ ವೇಳೆ ಹಿಂಬದಿಯಿಂದ ಬರುತ್ತಿದ್ದ ಕಾರು ಸಂಶಯಾಸ್ಪದವಾಗಿ ಕಾಣಿಸಿಕೊಂಡಿದ್ದು, ಪೊಲೀಸರು ತಡೆದಾಗ ಕಾರಿನಿಂದ ಇಬ್ಬರು ಪರಾರಿಯಾಗಿದ್ದಾರೆ. ಕಾರಿನಲ್ಲಿದ್ದ ಮತ್ತೋರ್ವನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕಾರಿನ ಮೌಲ್ಯ ಸುಮಾರು ₹5 ಲಕ್ಷ ಎಂದು ಅಂದಾಜಿಸಲಾಗಿದೆ.




ಈ ಸಂಬಂಧ ಅಮಾಸೆಬೈಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಕ್ರಮ ಕೈಗೊಳ್ಳಲಾಗಿದೆ.
ಬಂಧಿತರನ್ನು ಮುಸ್ತಾಕ್ ಹುಸೇನ್ ಸಾಬ್ ನದಾಫ್ (29), ಸಲೀಂ ಹುಸೇನ್ ಸಾಬ್ ನದಾಫ್ (33) ಹಾಗೂ ನದೀಂ ಅಬ್ದುಲ್ ಖಾದರ್ (34) ಎಂದು ಗುರುತಿಸಲಾಗಿದ್ದು, ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಪ್ರಕರಣದ ಕುರಿತು ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.








