ಕಾಪು : ಪುರಸಭೆಯ ನೂತನ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದ ಮೋಹಿನಿ ಶೆಟ್ಟಿ ಇವರನ್ನು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಹೂಗುಚ್ಚ ನೀಡಿ ಅಭಿನಂದಿಸಿದರು.
ಈ ಸಂದರ್ಭದಲ್ಲಿ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ, ಕಾಪು ಪುರಸಭೆಯ ಉಪಾಧ್ಯಕ್ಷರಾದ ಸರೀತಾ ಶಿವಾನಂದ, ಸ್ಥಾಯಿ ಸಮಿತಿ ಅಧ್ಯಕ್ಷರಾದ ಕಿರಣ್ ಆಳ್ವ, ಮಾಜಿ ಶಾಸಕರಾದ ಲಾಲಾಜಿ ಆರ್ ಮೆಂಡನ್, ನಿಕಟ ಪೂರ್ವ ಅಧ್ಯಕ್ಷರಾದ ಹರೀಣಾಕ್ಷಿ ದೇವಾಡಿಗ, ಕಾಪು ಮಂಡಲ ಬಿಜೆಪಿ ಅಧ್ಯಕ್ಷರಾದ ಜಿತೇಂದ್ರ ಶೆಟ್ಟಿ, ರಾಜ್ಯ ಬಿಜೆಪಿ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿಗಳಾದ ಶಿಲ್ಪಾ ಜಿ ಸುವರ್ಣ, ಕಾಪು ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷರಾದ ಸುಧಾಮ ಶೆಟ್ಟಿ ಹಾಗೂ ಕಾಪು ಪುರಸಭೆಯ ಸದಸ್ಯರು ಉಪಸ್ಥಿತರಿದ್ದರು.





