ನೆರೆ ಪಿಡಿತ ಪ್ರದೇಶಗಳನ್ನು ಡ್ರೋನ್ ಮೂಲಕ ಸೆರೆಹಿಡಿದ ದೃಶ್ಯ….
ಬೈಂದೂರು : ಬೈಂದೂರು ಹಾಗೂ ಕುಂದಾಪುರ ತಾಲೂಕಿನಲ್ಲಿ ಮಳೆ ಆರ್ಭಟ ಮುಂದುವರಿದಿದೆ. ಬೈಂದೂರು ತಾಲೂಕಿನಲ್ಲಿ ಎಡೆಬಿಡದೆ ಮಳೆಯಾಗುತ್ತಿದ್ದು, ಪ್ರಮುಖ ನದಿಗಳು ತುಂಬಿ ಹರಿಯುತ್ತಿದೆ. ಬೈಂದೂರಿನ ಸೌಪರ್ಣಿಕಾ, ಸುಮನಾವತಿ, ಸಂಕದ ಗುಂಡಿ, ಎಡ ಮಾವಿನ ಹೊಳೆ ತುಂಬಿ ಹರಿಯುತ್ತಿದ್ದು, ನದಿ ಪಾತ್ರ, ನಾಡ, ನಾವುಂದ, ಮರವಂತೆ, ಬಡಾಕೆರೆ ಚಿಕ್ಕಳ್ಳಿ ಪಡುಕೋಣೆ ಆನಗಳ್ಳಿ ಹಳಗೇರಿ ಜನರು ಎಚ್ಚರ ವಹಿಸಬೇಕು ಪಶ್ಚಿಮ ಘಟ್ಟದಲ್ಲಿ ಮಳೆ ಮುಂದುವರಿದರೆ ನೆರೆ ಕಟ್ಟಿಟ್ಟ ಬುತ್ತಿ.
ಪ್ರತಿ ವರ್ಷ ಮಳೆಗಾಲ ಬಂದರೆ ನಮಗೆ ಸಮಸ್ಯೆ ತಪ್ಪಿದ್ದಲ್ಲ. ಮಳೆಗಾಲದಲ್ಲಿನ ಇಲ್ಲಿನ ನೂರಕ್ಕೂ ಅಧಿಕ ಮನೆಯವರಿಗೆ ತಲೆನೋವು ಕಟ್ಟಿಟ್ಟಬುತ್ತಿ. ಹೆಚ್ಚುಕಮ್ಮಿ ನಾಲ್ಕೈದು ದಿನವಾದರೂ ಮನೆ ಬಿಟ್ಟು ಹೊರಬಾರಲಾಗದ ದುಸ್ಥಿತಿ. , ದಿನಸಿ, ತರಕಾರಿ ತರಬೇಕಾದರೂ ಕೂಡ ದೋಣಿ ಬೇಕು…
ಸ್ಥಳೀಯ ಯುವಕರು ಯುವಕರು ಮೀನುಗಾರರ ಶ್ರಮದಾನ…
ನಾವುಂದ, ಬಡಾಕೆರೆ,ಮರವಂತೆ ಸಾಲ್ಬುಡ, ಅರೆಹೊಳೆ, ಕೋಣ್ಕಿ, ಕುದ್ರು, ಚಿಕ್ಕಳ್ಳಿ, ಪಡುಕೋಣೆ ಭಾಗದಲ್ಲಿ ನೆರೆ ಸಮಸ್ಯೆ ಈ ವರ್ಷವೇನೂ ಹೊಸತಲ್ಲ. ಹಲವು ದಶಕಗಳಿಂದ ಇಲ್ಲಿನ ಜನಕ್ಕೆ ಮಳೆಗಾಲ ಶಾಪವೆಂದರೂ ತಪ್ಪಾಗದು. ಮಳೆಗಾದಲ್ಲಿ ಇಲ್ಲಿಗಾಗಿ ಮೂರ್ನಾಲ್ಕು ದೋಣಿ ಇಲ್ಲಿಗೆ ಮೀಸಲಿಡಬೇಕು. ಅನಾರೋಗ್ಯ ಪೀಡಿತರು ಸಹಿತ ಆಹಾರ ಸಾಮಾಗ್ರಿ, ದಿನಸಿ ತರಬೇಕಾದರೆ ದೋಣಿ ಏರಿ ಪೇಟೆಗೆ ಬರಬೇಕು. ಒಂದು ದಡದಿಂದ ಮತ್ತೊಂದು ದಡಕ್ಕೆ ಸುಮಾರು ಮೂರು ಕಿಲೋಮೀಟರ್ ದೂರ ದೋಣಿ ಚಲಾಯಿಸುವುದು ನಿಜಕ್ಕೂ ಸಾಹಸವಾಗಿದೆ. ಪ್ರತಿವರ್ಷ ಮಳೆಗಾಲದಲ್ಲಿ ಈ ಭಾಗದ ಯುವಕರ ಸಹಿತ ದೋಣಿ ಚಲಾಯಿಸಲು ತಿಳಿದವರು ಹಲವು ಮಂದಿ ದೋಣಿ ಯಾನದ ಮೂಲಕ ಸಾರ್ವಜನಿಕರಿಗೆ ನೆರವಾಗುವ ಸಾಹಸಿಗಳಾಗಿ ಶ್ರಮದಾನ ಮಾಡುತ್ತಾರೆ.
ನೆರೆ ಪಿಡಿತ ಪ್ರದೇಶಗಳಿಗೆ ಶಾಶ್ವತ ಪರಿಹಾರ ಇದುವರೆಗೂ ದೊರಕಿಲ್ಲ ಮುನ್ನೆಚ್ಚರಿಕೆ ಕ್ರಮವಾಗಿ ಸಾಲ್ಬುಡ ಮತ್ತು ಬಡಾಕೆರೆ ಪಡುಕೋಣೆ, ಮರವಂತೆ ರಸ್ತೆಗಳು ಎತ್ತರ ಮಾಡಿದರೆ ಸ್ವಲ್ಪಮಟ್ಟಿಗೆ ಈ ಪ್ರದೇಶ ಜನರಿಗೆ ಉಪಯೋಗವಾಗುತ್ತದೆ.

