Home Crime ಪುತ್ತೂರು : ಅತ್ಯಾಚಾರ, ವಂಚನೆ ಪ್ರಕರಣ : ಆರೋಪಿ ಶ್ರೀಕೃಷ್ಣರಾವ್ ಜಾಮೀನು ಅರ್ಜಿ ತಿರಸ್ಕೃತ…!!

ಪುತ್ತೂರು : ಅತ್ಯಾಚಾರ, ವಂಚನೆ ಪ್ರಕರಣ : ಆರೋಪಿ ಶ್ರೀಕೃಷ್ಣರಾವ್ ಜಾಮೀನು ಅರ್ಜಿ ತಿರಸ್ಕೃತ…!!

ಪುತ್ತೂರು : ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ ಆಕೆಯನ್ನು ಗರ್ಭಿಣಿ ಮಾಡಿ ಇದೀಗ ಮಗು ಕರುಣಿ ಬಳಿಕ ಮದುವೆಗೆ ನಿರಾಕರಿಸಿ ವಂಚನೆ ಮಾಡಿದ ಪ್ರಕರಣದಲ್ಲಿ ಜೈಲಿನಲ್ಲಿರುವ ಬಿಜೆಪಿ ಮುಖಂಡ ಪಿ.ಜಿ. ಜಗನ್ನಿವಾಸ್ ರಾವ್ ಪುತ್ರ ಶ್ರೀಕೃಷ್ಣ ಜೆ. ರಾವ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ನ್ಯಾಯಾಲಯ ತಿರಸ್ಕರಿಸಿದೆ.

ಮಂಗಳೂರು 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜಾಮೀನು ಅರ್ಜಿಯನ್ನು ತಿರಸ್ಕೃತಗೊಳಿಸಿ ಆದೇಶಿಸಿದೆ. ಆರೋಪಿ ಶ್ರೀಕೃಷ್ಣರಾವ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಶುಕ್ರವಾರ ತನಿಖೆಗೆತ್ತಿಕೊಂಡ ನ್ಯಾಯಾಲಯವು ವಾದ-ವಿವಾದವನ್ನು ಆಲಿಸಿ ತನ್ನ ಅಂತಿಮ ತೀರ್ಪನ್ನು ಪ್ರಕಟಿಸಿದ್ದು ಜಾಮೀನು ನಿರಾಕರಿಸಿ ಅರ್ಜಿಯನ್ನು ವಜಾಗೊಳಿಸಿ ಆದೇಶಿಸಿದೆ.