ಕಾಪು: ವಿಕಲಚೇತನ ಹಾಗೂ ಹಿರಿಯ ನಾಗರಿಕ ಸಬಲೀಕರಣ ಇಲಾಖೆ ಉಡುಪಿ ಜಿಲ್ಲೆ ಮತ್ತು ಶಾಸಕರ ಪ್ರದೇಶಾಭಿವೃದ್ಧಿ ನಿಧಿಯಿಂದ ವಿಕಲಚೇತನ ಫಲಾನುಭವಿಗಳಿಗೆ ಮಂಜೂರಾದ ಯಂತ್ರ ಚಾಲಿತ ದ್ವಿಚಕ್ರ ವಾಹನ ಹಾಗೂ ಶ್ರವಣ ಸಾಧನವನ್ನು ಇಂದು ದಿನಾಂಕ 07-04-2026 ರಂದು ಕಾಪು ಶಾಸಕರ ಕಚೇರಿಯಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ವಿತರಿಸಿದರು.
ಬಡಾ ಗ್ರಾಮ ಪಂಚಾಯತ್ ವ್ಯಾಪ್ತಿಯ ದಿನೇಶ್ ಆಚಾರ್ಯ ಅವರಿಗೆ ಯಂತ್ರ ಚಾಲಿತ ದ್ವಿಚಕ್ರ ವಾಹನ ಹಾಗೂ ಮಲ್ಲಾರು ರಾಣ್ಯಕೇರಿ ನಿವಾಸಿ ಶಾಂತ ಅವರಿಗೆ ಶ್ರವಣ ಸಾಧನವನ್ನು ವಿತರಿಸಲಾಯಿತು.





