Home Kundapura News ಆಕಾಶವಾಣಿ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ನಿಧನ…!!

ಆಕಾಶವಾಣಿ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ನಿಧನ…!!

ಕುಂದಾಪುರ: ಆಕಾಶವಾಣಿಯ ಹಿರಿಯ ಕಲಾವಿದ ಹಾಗೂ ಖ್ಯಾತ ಜಾನಪದ ಗಾಯಕ ಡಾ. ಗಣೇಶ್ ಗಂಗೊಳ್ಳಿ (64) ಅವರು ಮೆದುಳಿನ ಕಾಯಿಲೆಯಿಂದ ನಿಧನರಾಗಿದ್ದಾರೆ.

ಕಳೆದ ರಾತ್ರಿ ಸಮಾರಂಭವೊಂದರಲ್ಲಿ ಗಾಯಕರಾಗಿ ಭಾಗವಹಿಸಿ ಮನೆಗೆ ಹಿಂದಿರುಗಿದ ಅವರು ಅಸ್ವಸ್ಥಗೊಂಡು ಕುಸಿದು ಬಿದ್ದಿದ್ದರು. ತಕ್ಷಣ ಕುಟುಂಬಸ್ಥರು ಅವರನ್ನು ಉಡುಪಿಯ ಆದರ್ಶ ಆಸ್ಪತ್ರೆಗೆ ದಾಖಲಿಸಿದರೂ, ವೈದ್ಯರು ಮೆದುಳಿನ ಕಾಯಿಲೆಯಿಂದ ಮೃತಪಟ್ಟಿದ್ದಾರೆಂದು ದೃಢಪಡಿಸಿದ್ದಾರೆ.

ಮೃತರು ಪತ್ನಿ ಮತ್ತು ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

ಡಾ. ಗಣೇಶ್ ಗಂಗೊಳ್ಳಿ ಅವರು ಉಡುಪಿ ಜಿಲ್ಲೆಯ ಪ್ರಸಿದ್ಧ ಜಾನಪದ ಕಲಾವಿದರಾಗಿದ್ದು, ಕನ್ನಡ ಜಾನಪದ ಪರಿಷತ್‌ನ ಉಡುಪಿ ಜಿಲ್ಲಾಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದರು. ಮೂರು ದಶಕಗಳಿಗೂ ಹೆಚ್ಚು ಕಾಲ ಜಾನಪದ ಸಂಗೀತ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ್ದ ಅವರು ಕರ್ನಾಟಕ ಜಾನಪದ ಅಕಾಡೆಮಿ ಪ್ರಶಸ್ತಿ ಸೇರಿದಂತೆ ಅನೇಕ ಗೌರವಗಳಿಗೆ ಪಾತ್ರರಾಗಿದ್ದರು.

ದೂರದರ್ಶನ ಚಂದನ ವಾಹಿನಿಯ ‘ಗಾನಗರಡಿ – ಇದು ಜನಪದರ ಚಾವಡಿ’ ಕಾರ್ಯಕ್ರಮದ ಮೂಲಕ ಜನಪದ ಗೀತೆಗಳನ್ನು ಹಾಡಿ ಮನೆಮಾತಾಗಿದ್ದರು. ‘ವಿದ್ಯಾ ಸೇವಾರತ್ನ’ ಪ್ರಶಸ್ತಿ ಸಹ ಇವರಿಗೆ ಲಭಿಸಿತ್ತು.