Home Crime ಶವಗಳನ್ನು ಹೂತಿಟ್ಟ ಪ್ರಕರಣ : ದೂರುದಾರ ಎಸ್ ಐ ಟಿ ಎದುರು ವಿಚಾರಣೆಗೆ ಹಾಜರು…!!

ಶವಗಳನ್ನು ಹೂತಿಟ್ಟ ಪ್ರಕರಣ : ದೂರುದಾರ ಎಸ್ ಐ ಟಿ ಎದುರು ವಿಚಾರಣೆಗೆ ಹಾಜರು…!!

ದಕ್ಷಿಣ ಕನ್ನಡ : ಧರ್ಮಸ್ಥಳದಲ್ಲಿ ಶವಗಳನ್ನು ಹೂತಿಟ್ಟ ಪ್ರಕರಣದ ತನಿಖೆ ಚುರುಕುಗೊಂಡಿದ್ದು, ದೂರುದಾರ ಎಸ್ ಐ ಟಿ ಎದುರು ವಿಚಾರಣೆಗೆ ಹಾಜರಾಗಿದ್ದಾನೆ.

ರಾಜ್ಯ ಸರ್ಕಾರ ನಿಯೋಜಿಸಿರುವ ಎಸ್ ಐ ಟಿ (ವಿಶೇಷ ತನಿಖಾ ತಂಡ) ದ ಎದುರು ಈತ ವಿಚಾರಣೆಗೆ ಹಾಜರಾಗಿದ್ದಾನೆ.

ಕದ್ರಿಯಲ್ಲಿರುವ ಐಬಿ ಕಚೇರಿಯಲ್ಲಿ ತೆರೆದಿರುವ ಎಸ್ ಐ ಟಿ ಕಚೇರಿಗೆ ದೂರುದಾರ ತನ್ನ ವಕೀಲರ ಜೊತೆ ಆಗಮಿಸಿದ್ದಾನೆ. ಡಿಐಜಿ ಎಂಎನ್ ಅನುಚೇತ್ ಸಮ್ಮುಖದಲ್ಲಿ ದೂರುದಾರನ ವಿಚಾರಣೆ ನಡೆಯಲಿದೆ. ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಟ್ಟಿರುವ ಪ್ರಕರಣದ ತನಿಖೆಗೆ ಇಂದು ಎಸ್ಐಟಿ ಅಧಿಕಾರಿಗಳ ತಂಡ ಧರ್ಮಸ್ಥಳಕ್ಕೆ ತೆರಳಿದ್ದು, ಇಂದಿನಿಂದ ತನಿಖೆ ನಡೆಸಲಿದೆ. ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷ ಪತ್ರದಲ್ಲಿ ಪ್ರಸ್ತಾಪಿಸಿರುವ ಅಂಶಗಳು ಹಾಗೂ ದಕ್ಷಿಣ ಕನ್ನಡ ಜಿಲ್ಲೆ, ಧರ್ಮಸ್ಥಳ ಪೊಲೀಸ್ ಠಾಣೆ ಮೊ.ಸಂ. 39/2025 ಕಲಂ 211(ಎ), ಬಿ.ಎನ್.ಎಸ್. ಪ್ರಕರಣಕ್ಕೆ ಸಂಬಂಧಿಸಿದಂತೆ ಸಮಗ್ರ ರಾಜ್ಯ ಸರ್ಕಾರ ಎಸ್ಐಟಿ ರಚಿಸಿ ಆದೇಶಿಸಿದೆ.