ಸಿದ್ದಾಪುರ: ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ದಾನಿಗಳು, ಸಂಘ ಸಂಸ್ಥೆಗಳು ಮುಂದೆ ಬರುತ್ತಿರುವುದು ಉತ್ತಮ ಬೆಳವಣಿಗೆಯಾಗಿದೆ. ದಾನಿಗಳು, ಸಂಘ ಸಂಸ್ಥೆಗಳು ಕೊಡುಗೆಗಳನ್ನು ನೀಡಿದಾಗ ಸರ್ಕಾರಿ ಶಾಲೆಗಳು ಖಾಸಗಿ ಶಾಲೆಗಳಿಗೆ ಸರಿಸಮನಾಗಿ ಬೆಳೆಯಲು ಸಾಧ್ಯ ಎಂದು ಅಂಪಾರು ವ್ಯವಸಾಯಿಕ ಸೇವಾ ಸಹಕಾರಿ ಸಂಘ ಉಪಾಧ್ಯಕ್ಷ ಹಾಗೂ ಉದ್ಯಮಿ ನವೀನಕುಮಾರ್ ಶೆಟ್ಟಿ ಶಾನ್ಮಟ್ಟು ಹೇಳಿದರು.
ಕೊಡ್ಲಾಡಿ ಮಾರ್ಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಕರ್ನಾಟಕ ರಕ್ಷಣಾ ವೇದಿಕೆ ಕುಂದಾಪುರ ತಾಲೂಕು ಘಟಕದ ವತಿಯಿಂದ ಇತ್ತೀಚೆಗೆ ನಡೆದ ಕೊಡೆ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿದರು.
ಕರವೇ ಜಿಲ್ಲಾ ಗೌರವಾಧ್ಯಕ್ಷ ಅನ್ಸಾರ್ ಅಹಮ್ಮದ್ ಅಧ್ಯಕ್ಷತೆ ವಹಿಸಿ ಮಾತನಾಡಿ, ಕರವೇಯಿಂದ ನೀಡಲಾದ ಕೊಡುಗೆಗಳನ್ನು ವಿದ್ಯಾರ್ಥಿಗಳು ಸದುಪಯೋಗ ಮಾಡಬೇಕು ಎಂದರು.
ಕರವೇ ಮಹಿಳಾ ಘಟಕ ಜಿಲ್ಲಾಧ್ಯಕ್ಷೆ ಜ್ಯೋತಿ ಶೇರಿಗಾರ್, ಕುಂದಾಪುರ ತಾಲೂಕು ಅಧ್ಯಕ್ಷ ಉದಯಕುಮಾರ ಶೆಟ್ಟಿ ಮೂಡುಬಗೆ, ಶಿಕ್ಷಣ ಸಂಯೋಜಕ ರಾಘವೇಂದ್ರ, ಹಳೇ ವಿದ್ಯಾರ್ಥಿ ಸಂಘ ಅಧ್ಯಕ್ಷ ಅಶ್ವಿತ್ ಶೆಟ್ಟಿ ಕೊಡ್ಲಾಡಿ, ಎಸ್‌ಡಿಎಂಸಿ ಅಧ್ಯಕ್ಷ ಅಶೋಕ ಭೋವಿ, ಮುಖ್ಯ ಶಿಕ್ಷಕ ಲಕ್ಷ್ಮಣ, ಕರವೇ ಸದಸ್ಯರು ಉಪಸ್ಥಿತರಿದ್ದರು. ಮುಖ್ಯ ಶಿಕ್ಷಕ ಲಕ್ಷ್ಮಣ ಸ್ವಾಗತಿಸಿದರು. ಮೋಹಿನಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಗಣೇಶ ನಿರೂಪಿಸಿದರು.

