ಕುಂದಾಪುರ: ಉಡುಪಿ ಜಿಲ್ಲೆಯ ಕುಂದಾಪುರದ ಸಮಾಜ ಸೇವಕ, ಆಂಬುಲೆನ್ಸ್ ಚಾಲಕ ಅಯ್ಯೂಬ್ ಕೋಟೇಶ್ವರ (55) ಜು. 27 ರಂದು ಭಾನುವಾರ ಮುಂಜಾನೆ ಮನೆಯಲ್ಲೇ ನೇಣುಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿಯಲಾಗಿದೆ.
ಇವರು ಹಲವು ವರ್ಷಗಳಿಂದ ಕೋಟೇಶ್ವರ ಖಾಸಗಿ ಆಸ್ಪತ್ರೆಯಲ್ಲಿ ಆಂಬುಲೆನ್ಸ್ ಚಾಲಕನಾಗಿ, ಸಮಾಜ ಸೇವಕನಾಗಿ ಸೇವೆ ಸಲ್ಲಿಸಿದ್ದರು.
ಇತ್ತೀಚಿಗೆ ಸ್ವಂತ ಆಂಬುಲೆನ್ಸ್ ನ್ನು ನಡೆಸುತ್ತಿದ್ದ ಇವರು ಜು. 18 ರಂದು ರೋಗಿಯೊಬ್ಬರನ್ನು ಮಣಿಪಾಲ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ವೇಳೆ ಉಡುಪಿ ಎಂಜೆಎಂ ಕಾಲೇಜಿನ ಸಮೀಪ ರಸ್ತೆ ಡಿವೈಡರ್ ಬಳಿ ನಿಯಂತ್ರಣ ತಪ್ಪಿ ಬ್ಯಾರಿಕೇಡ್ ಗಳಿಗೆ ಡಿಕ್ಕಿ ಹೊಡೆದು ರೋಗಿ ಸಾವನ್ನಪ್ಪಿದ್ದರು. ಇದರಿಂದ ಮಾನಸಿಕ ಖಿನ್ನತೆಗೆ ಒಳಗಾಗಿದ್ದರು ಎಂದು ತಿಳಿದು ಬಂದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.
ಮೃತರು ಹೆಂಡತಿ, ಓರ್ವ ಮಗಳು ಹಾಗೂ ಅಪಾರ ಬಂಧುಬಳಗವನ್ನು ಅಗಲಿದ್ದಾರೆ.