Home Karavali Karnataka ಅರಬ್ಬಿ ಸಮುದ್ರದಲ್ಲಿ ಮೀನುಗಾರರನ್ನು ಹೊತ್ತೊಯ್ಯುತ್ತಿದ್ದ ದೋಣಿ ಮುಳುಗಡೆ : ಮೂವರು ನಾಪತ್ತೆ…!!

ಅರಬ್ಬಿ ಸಮುದ್ರದಲ್ಲಿ ಮೀನುಗಾರರನ್ನು ಹೊತ್ತೊಯ್ಯುತ್ತಿದ್ದ ದೋಣಿ ಮುಳುಗಡೆ : ಮೂವರು ನಾಪತ್ತೆ…!!

ಮಹಾರಾಷ್ಟ್ರ : ಅರಬ್ಬಿ ಸಮುದ್ರದಲ್ಲಿ ಮೀನುಗಾರರನ್ನು ಹೊತ್ತೊಯ್ಯುತ್ತಿದ್ದ ದೋಣಿಯೊಂದು ಮುಳುಗಿ ಮೂವರು ನಾಪತ್ತೆಯಾಗಿರುವ ಘಟನೆ ಮಹಾರಾಷ್ಟ್ರದ ರಾಯಗಢ ಜಿಲ್ಲೆಯಲ್ಲಿ ಸಂಭವಿಸಿದೆ.

ಈ ದೋಣಿಯು ಖಾಂಡೇರಿಯಿಂದ ಅಲಿಬಾಗ್ ಬಳಿಯ ಸಮುದ್ರದಲ್ಲಿ ಮೀನುಗಾರಿಕೆಗೆ ತೆರಳಿದ್ದ ವೇಳೆ ಘಟನೆ ಸಂಭವಿಸಿದೆ. ಭಾರೀ ಮಳೆ ಮತ್ತು ಪ್ರತಿಕೂಲ ಹವಾಮಾನದಿಂದಾಗಿ ದೋಣಿ ಮಗುಚಿದೆ. ಕೂಡಲೇ ಎಚ್ಚೆತ್ತ ಮೀನುಗಾರರು ನೀರಿಗೆ ಹಾರಿದ್ದಾರೆ. 8 ಮಂದಿ ಮೀನುಗಾರರ ಪೈಕಿ 5 ಮಂದಿ ಈಜಿಕೊಂಡು ದಡ ಸೇರಿದ್ದಾರೆ.

ಕಾಣೆಯಾದವರಿಗಾಗಿ ಶೋಧಕಾರ್ಯ ಮುಂದುವರಿದಿದೆ. ನಾಪತ್ತೆಯಾಗಿರುವ ಮೂವರು ಮೀನುಗಾರರನ್ನು ಪತ್ತೆಹಚ್ಚಲು ಪೊಲೀಸರು ಮತ್ತು ಸ್ಥಳೀಯ ವಿಪತ್ತು ನಿರ್ವಹಣಾ ತಂಡ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದೆ. ಜೊತೆಗೆ ಡ್ರೋನ್‌ಗಳನ್ನು ಸಹ ನಿಯೋಜಿಸಲಾಗಿದೆ. ಇನ್ನು ಈಜಿ ದಡ ಸೇರಿದ ಐವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.