ಬಜ್ಪೆ: ಗುರುಪುರ ಸೇತುವೆಯಿಂದ ಯುವಕನೋರ್ವ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ಶೋಧ ಕಾರ್ಯ ಮುಂದುವರಿದಿದೆ.
ನಾಪತ್ತೆಯಾದ ಯುವಕ ಮೂಡುಪರಾರ ನಿವಾಸಿ ಕೌಶಿಕ್(21) ಎಂದು ತಿಳಿದು ಬಂದಿದೆ.
ಕೌಶಿಕ್ ಪೈಂಟಿಂಗ್ ಮತ್ತು ಬಸ್ ಏಜೆಂಟ್ ಆಗಿ ಕೆಲಸ ಮಾಡುತ್ತಿದ್ದನು. ಗುರುಪುರ ಸೇತುವೆಯ ಮೇಲೆ ಈತನ ಹೊಂಡಾ ಡಿಯೋ ಸ್ಕೂಟರ್ ಅನಾಥವಾಗಿ ನಿಂತಿರುವುದು ಕಂಡುಬಂದಿದೆ.
ಅಲ್ಲದೇ ಸೇತುವೆಯ ತಡೆಗೋಡೆಯ ಮೇಲೆ ಆತನ ಮೊಬೈಲ್ ಫೋನ್ ಪತ್ತೆಯಾಗಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.
ಕೌಶಿಕ್ ಸೇತುವೆಯಿಂದ ನದಿಗೆ ಹಾರಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.
ಮಾಹಿತಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ನಿನ್ನೆಯಿಂದಲೇ ಬೋಟ್ ಬಳಸಿ ನದಿಯಲ್ಲಿ ಹುಡುಕಾಟ ಆರಂಭಿಸಿದ್ದಾರೆ. ಆದರೆ ಇದುವರೆಗೆ ಯಾವುದೇ ಸುಳಿವು ಸಿಕ್ಕಿಲ್ಲ ಎಂದು ತಿಳಿದು ಬಂದಿದೆ.
ಘಟನಾ ಸ್ಥಳಕ್ಕೆ ಬಜ್ಪೆ ಪೊಲೀಸ್ ಠಾಣೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಯುವಕನ ಸ್ಕೂಟರ್ ಮತ್ತು ಮೊಬೈಲ್ ಅನ್ನು ವಶಕ್ಕೆ ಪಡೆಯಲಾಗಿದ್ದು, ಈತ ಇಂತಹ ನಿರ್ಧಾರ ಕೈಗೊಳ್ಳಲು ಕಾರಣವೇನು ಎಂಬ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.




