ಕೊಲ್ಲೂರು : ಉಡುಪಿ ಜಿಲ್ಲೆಯ ಕೊಲ್ಲೂರು ಪೊಲೀಸ್ ಠಾಣಾ ವ್ಯಾಪ್ತಿಗೆ ಸೇರಿದ ರೌಡಿ ಶೀಟರ್ ಕಾರ್ತಿಕ್ ಆಚಾರ್ ವಿರುದ್ಧ ಗಡಿಪಾರು ಆದೇಶ ಜಾರಿಗೊಂಡಿದೆ.
ಕಾರ್ತಿಕ್ ಆಚಾರ್ (ತಂದೆ: ವೆಂಕಟರಮಣ ಅಚಾರ್) ವಿರುದ್ಧ ವಿಶೇಷ ಕಾರ್ಯಾಂಗ ದಂಡಾಧಿಕಾರಿ ಹಾಗೂ ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕರು ದಿನಾಂಕ 09.04.2026 ರಂದು ಗಡಿಪಾರು ಆದೇಶ ಹೊರಡಿಸಿದ್ದಾರೆ.
ಈತನ ವಿರುದ್ಧ ಒಟ್ಟು 4 ಪ್ರಕರಣಗಳು ದಾಖಲಾಗಿದ್ದು, ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ರೌಡಿ ಹಾಳೆ ತೆರೆಯಲಾಗಿದೆ.
ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಈತನನ್ನು ಬೆಂಗಳೂರು ಕಮೀಷನರೇಟ್ ವ್ಯಾಪ್ತಿಯ ಪೀಣ್ಯ ಪೊಲೀಸ್ ಠಾಣಾ ವ್ಯಾಪ್ತಿಗೆ ಗಡಿಪಾರು ಮಾಡಲಾಗಿದೆ.





