Home Crime ಬೆಳ್ತಂಗಡಿ: ವಿಷ ಸೇವಿಸಿ ವಿವಾಹಿತೆ ಆತ್ಮಹತ್ಯೆ…!!

ಬೆಳ್ತಂಗಡಿ: ವಿಷ ಸೇವಿಸಿ ವಿವಾಹಿತೆ ಆತ್ಮಹತ್ಯೆ…!!

ಬೆಳ್ತಂಗಡಿ ತಾಲೂಕಿನ ಮರೋಡಿ ಗ್ರಾಮದ ಪಚ್ಚಡಿ ನಿವಾಸಿ ವಿವಾಹಿತೆ ವಾಣಿಶ್ರೀ (26) ಎಂಬವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಸೋಮವಾರ ನಡೆದಿದೆ.

ಇವರಿಗೆ ಒಂದು ವರ್ಷ ಮೂರು ತಿಂಗಳ ಹಿಂದೆ ಮದುವೆಯಾಗಿದ್ದು, ಮನೆಯಲ್ಲಿ ಯಾರು ಇಲ್ಲದ ವೇಳೆ ವಿಷ ಸೇವಿಸಿದ್ದರು. ಮನೆಯವರು ಬಂದಾಗ ಜೀವನ್ಮರಣ ಸ್ಥಿತಿಯಲ್ಲಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಈ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.