Home Latest ಕಟಪಾಡಿ ಜಂಕ್ಷನ್ ಓವರ್‌ಪಾಸ್ ಕಾಮಗಾರಿ ಪ್ರಗತಿ ಪರಿಶೀಲನೆ: ಒಂದು ಭಾಗ ಪೂರ್ಣಗೊಂಡ ರಸ್ತೆ ವಾಹನ ಸಂಚಾರಕ್ಕೆ...

ಕಟಪಾಡಿ ಜಂಕ್ಷನ್ ಓವರ್‌ಪಾಸ್ ಕಾಮಗಾರಿ ಪ್ರಗತಿ ಪರಿಶೀಲನೆ: ಒಂದು ಭಾಗ ಪೂರ್ಣಗೊಂಡ ರಸ್ತೆ ವಾಹನ ಸಂಚಾರಕ್ಕೆ ಮುಕ್ತ

ಉಡುಪಿ: ಕಟಪಾಡಿ ಜಂಕ್ಷನ್ ಬಳಿ ನಡೆಯುತ್ತಿರುವ ಓವರ್‌ಪಾಸ್ ಕಾಮಗಾರಿ ಭರದಿಂದ ಸಾಗುತ್ತಿದ್ದು, ಇಂದು (10-04-2026) ಸಂಸದ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಸ್ಥಳಕ್ಕೆ ಭೇಟಿ ನೀಡಿ ಕಾಮಗಾರಿಯ ಪ್ರಗತಿಯನ್ನು ಪರಿಶೀಲಿಸಿದರು.

ಈ ವೇಳೆ ಕಾಮಗಾರಿಯ ಒಂದು ಭಾಗ ಪೂರ್ಣಗೊಂಡ ಹಿನ್ನೆಲೆಯಲ್ಲಿ, ಸಂಸದರು ಹಾಗೂ ಶಾಸಕರು ಆ ಭಾಗದ ರಸ್ತೆಯನ್ನು ವಾಹನ ಸಂಚಾರಕ್ಕೆ ಅಧಿಕೃತವಾಗಿ ಮುಕ್ತಗೊಳಿಸಿದರು. ಇದರಿಂದ ಸ್ಥಳೀಯರಿಗೆ ಸಂಚಾರದಲ್ಲಿ ಸ್ವಲ್ಪ ಮಟ್ಟಿನ ನಿರಾಳತೆ ದೊರೆತಿದೆ.

ಕಾರ್ಯಕ್ರಮದಲ್ಲಿ ಕಾಪು ಮಂಡಲ ಬಿಜೆಪಿ ಅಧ್ಯಕ್ಷ ಜಿತೇಂದ್ರ ಶೆಟ್ಟಿ, ಮಾಜಿ ಶಾಸಕ ಲಾಲಾಜಿ ಆರ್ ಮೆಂಡನ್, ಉಡುಪಿ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ಗೀತಾಂಜಲಿ ಸುವರ್ಣ, ಶಿಲ್ಪಾ ಜಿ ಸುವರ್ಣ, ಕಟಪಾಡಿ ಗ್ರಾಮ ಪಂಚಾಯತ್ ಮಾಜಿ ಸದಸ್ಯರಾದ ಶ್ರೀನಿವಾಸ್ ಕಿಣಿ, ಕವಿತಾ ಸುವರ್ಣ, ಕುರ್ಕಾಲು ಗ್ರಾಮ ಪಂಚಾಯತ್ ಮಾಜಿ ಸದಸ್ಯರಾದ ಸುದರ್ಶನ್ ಭಟ್, ಎಂ.ಜಿ ನಾಗೇಂದ್ರ ಸೇರಿದಂತೆ ಹಲವು ಬಿಜೆಪಿ ಮುಖಂಡರು, ಮಹಿಳಾ ಮೋರ್ಚಾ ಪದಾಧಿಕಾರಿಗಳು, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.