ಉಡುಪಿ : 2025-26ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು,:ಮೂಡುಬೆಳ್ಳೆ ನೆಲ್ಲಿಕಟ್ಟೆ ಜ್ಞಾನಗಂಗಾ ಪದವಿಪೂರ್ವ ಕಾಲೇಜು 97.33% ಫಲಿತಾಂಶ ದಾಖಲಿಸಿದೆ.
ವಾಣಿಜ್ಯ ವಿಭಾಗದಲ್ಲಿ ಕುಮಾರಿ ಅದಿತಿ ಭಟ್ 594 ಅಂಕಗಳೊಂದಿಗೆ ರಾಜ್ಯ ಮಟ್ಟದಲ್ಲಿ ಏಳನೇ ರಾಂಕ್ ಹಾಗೂ ವಿಜ್ಞಾನ ವಿಭಾಗದಲ್ಲಿ ರಶ್ಮಿತಾ ಆರ್ ನಾಯಕ 590 ಅಂಕಗಳೊಂದಿಗೆ ರಾಜ್ಯ ಮಟ್ಟದಲ್ಲಿ 10ನೆಯ ರಾ0ಕ್ ಪಡೆದಿದ್ದಾರೆ.
ಒಟ್ಟು 51 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿ, 85 ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿರುತ್ತಾರೆ.
ಉತ್ತಮ ಸಾಧನೆಗೈದ ವಿದ್ಯಾರ್ಥಿಗಳಿಗೆ ಜ್ಞಾನಗಂಗಾ ಪದವಿಪೂರ್ವ ಕಾಲೇಜಿನ
ಪ್ರಾಂಶುಪಾಲರು, ಉಪನ್ಯಾಸಕ ವೃಂದ, ಸಿಬ್ಬಂದಿ ವರ್ಗ ಹಾಗೂ ಆಡಳಿತ ಮಂಡಳಿ ಅಭಿನಂದನೆ ತಿಳಿಸಿದೆ.






