ಉಡುಪಿ: ನಗರಸಭೆ ಸಭಾಂಗಣದಲ್ಲಿ ನಗರಸಭೆಯ ಆಡಳಿತಾಧಿಕಾರಿಗಳಾದ ಉಡುಪಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆದ ಮಳೆಗಾಲದ ಪೂರ್ವ ಸಿದ್ಧತೆಗಳ ಬಗ್ಗೆ ಆಯೋಜಿಸಿದ್ದ ಸಭೆಯಲ್ಲಿ ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಯಶ್ ಪಾಲ್ ಸುವರ್ಣ ಭಾಗವಹಿಸಿ ನಗರದಾದ್ಯಂತ ನಿರಂತರ ಕುಡಿಯುವ ನೀರಿನ ಪೂರೈಕೆ, ಕೃತಕ ನೆರೆ ಹಾವಳಿ ತಪ್ಪಿಸುವ ನಿಟ್ಟಿನಲ್ಲಿ ರಾಜ ಕಾಲುವೆಗಳ ಹೂಳು ತೆರವು, ಅಪಾಯಕಾರಿ ಮರಗಳ ಗೆಲ್ಲುಗಳ ತೆರವು, ಮಳೆಗಾಲ ಆರಂಭವಾಗುವ ಮುನ್ನ ಬಾಕಿಯಿರುವ ಕಾಮಗಾರಿಗಳನ್ನು ಪೂರ್ಣ ಗೊಳಿಸುವಂತೆ ವಿಶೇಷ ಆದ್ಯತೆ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಉಡುಪಿ ಗುಂಡಿಬೈಲು ಪೆರಂಪಳ್ಳಿ ಮಣಿಪಾಲ ಮಾರ್ಗದಲ್ಲಿ ಪರ್ಮಿಟ್ ಹೊಂದಿರುವ ಖಾಸಗಿ ಬಸ್ಸುಗಳು ಸಂಚಾರ ಮಾಡದಿರುವ ಬಗ್ಗೆ ಸಾರ್ವಜನಿಕರಿಂದ ದೂರುಗಳು ಕೇಳಿಬರುತ್ತಿದ್ದು ,ತಕ್ಷಣ ಬಸ್ಸುಗಳ ಸಂಚಾರಕ್ಕೆ ಕ್ರಮ ವಹಿಸುವಂತೆ ಸಾರಿಗೆ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಲಾಯಿತು. ಅಗತ್ಯ ಮಾರ್ಗಗಳಲ್ಲಿ ಸರಕಾರಿ ಬಸ್ಸು ಸೇವೆ ಪ್ರಾರಂಭಿಸಲು ತಕ್ಷಣ ಕ್ರಮ ಕೈಗೊಳ್ಳಲು ಆದೇಶ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಆಗ್ರಹಿಸಿದರು.





