ಕುಂದಾಪುರ : ರಸ್ತೆ ಸುರಕ್ಷತೆ ಹಾಗೂ ಸಂಚಾರ ನಿಯಂತ್ರಣವನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ‘ನಮ್ಮ ನಾಡ ಒಕ್ಕೂಟ (ರಿ)’ ಹಾಗೂ ‘ನಮ್ಮ ನಾಡ ಒಕ್ಕೂಟ ಕಮ್ಯೂನಿಟಿ ಸೆಂಟರ್, ಕುಂದಾಪುರ’ ಇವರ ಆಶ್ರಯದಲ್ಲಿ ಕುಂದಾಪುರ ಸಂಚಾರ ಪೊಲೀಸ್ ಠಾಣೆಗೆ ಬ್ಯಾರಿಕೇಡ್‌ಗಳನ್ನು ಹಸ್ತಾಂತರಿಸಲಾಯಿತು.
ಕುಂದಾಪುರ ಸಂಚಾರ ಪೊಲೀಸ್ ಠಾಣೆಯ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಂಘಟನೆಯ ಪದಾಧಿಕಾರಿಗಳು ಬ್ಯಾರಿಕೇಡ್‌ಗಳನ್ನು ಕುಂದಾಪುರ ಸಂಚಾರ ಠಾಣೆಯ ಅಧಿಕಾರಿಗಳಿಗೆ ಅಧೀಕೃತವಾಗಿ ಹಸ್ತಾಂತರಿಸಿದರು.





