ಮಂಗಳೂರು: ಕುಳೂರು ಸೇತುವೆ ಸಮೀಪ ಬಸ್ ಬೈಕ್‌ಗೆ ಡಿಕ್ಕಿಯಾದ ಪರಿಣಾಮ ಗಂಭೀರ ಗಾಯಗೊಂಡ ಬೈಕ್ ಸವಾರ ದೀಕ್ಷಿತ್ (23) ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಮಧ್ಯಾಹ್ನ 12.05ರ ವೇಳೆಗೆ ದೀಕ್ಷಿತ್‌ರವರು ಬೈಕ್‌ನಲ್ಲಿ ಉಡುಪಿ-ಮಂಗಳೂರು ರಸ್ತೆಯಲ್ಲಿ ಸವಾರಿ ಮಾಡಿಕೊಂಡು ಹೋಗುತ್ತಿದ್ದ ಸಮಯ ಕೂಳೂರು ಸೇತುವೆ ಸಮೀಪದ ತಂಗುದಾಣದ ಬಳಿ ತಲುಪುತ್ತಿದ್ದಂತೆ ಅದೇ ರಸ್ತೆಯಲ್ಲಿ ಬಂದ ಬಸ್ ಡಿಕ್ಕಿಯಾಗಿದೆ.
ಪರಿಣಾಮ ದಿಕ್ಷೀತ್ ಮೋಟಾರ್ ಸೈಕಲ್ ಸಮೇತ ರಸ್ತೆಗೆ ಬಿದ್ದು ಗಂಭೀರ ಗಾಯಗೊಂಡಿದ್ದರು. ಕೂಡಲೇ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ನಗರದ ಉತ್ತರ ಸಂಚಾರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.





