Home Karavali Karnataka ಜಮ್ಮು ಕಾಶ್ಮೀರ ಪ್ರವಾಸಕ್ಕೆ ತೆರಳಿರುವ ಜಿಲ್ಲೆಯ ಪ್ರವಾಸಿಗರ ಮಾಹಿತಿ ಸಲ್ಲಿಸಲು ಸೂಚನೆ…!!

ಜಮ್ಮು ಕಾಶ್ಮೀರ ಪ್ರವಾಸಕ್ಕೆ ತೆರಳಿರುವ ಜಿಲ್ಲೆಯ ಪ್ರವಾಸಿಗರ ಮಾಹಿತಿ ಸಲ್ಲಿಸಲು ಸೂಚನೆ…!!

ಉಡುಪಿ : ಕಾಶ್ಮೀರದ ಪಹಲ್‌ಗಾಮದಲ್ಲಿ ಉಗ್ರರ ದಾಳಿಗೆ ಕನ್ನಡಿಗರಿಬ್ಬರು ಬಲಿಯಾಗಿರುವುದು ವಿಷಾದನೀಯ ಸಂಗತಿಯಾಗಿದೆ. ಆದ್ದರಿಂದ ಜಮ್ಮು ಕಾಶ್ಮೀರದ ಪ್ರವಾಸಕ್ಕೆ ತೆರಳಿರುವ ಕನ್ನಡಿಗರನ್ನು ರಾಜ್ಯಕ್ಕೆ ಮರಳಿ ತರಲು ರಾಜ್ಯ ಸರ್ಕಾರ ಪ್ರಯತ್ನಸುತ್ತಿದೆ. ಕರ್ನಾಟಕದಲ್ಲಿ ಪ್ರವಾಸ ನಿರ್ವಹಿಸುತ್ತಿರುವ ಪ್ರವಾಸಿ ಕಾರ್ಯಾಚರಣೆದಾರರು ತಮ್ಮ ಮೂಲಕ ಜಮ್ಮು-ಕಾಶ್ಮೀರಕ್ಕೆ ಪ್ರವಾಸಕ್ಕೆ ತೆರಳಿರುವ ಪ್ರಯಾಣಿಕರ ವಿವರಗಳನ್ನು ಹಾಗೂ ಪ್ರವಾಸಿಗರ ಸಂಬಂಧಿಕರು ಅಥವಾ ಪರಿಚಯಸ್ಥರು ಪ್ರವಾಸಕ್ಕೆ ತೆರಳಿರುವವರ ವಿವರಗಳನ್ನು ಸಹಾಯವಾಣಿ ಸಂಖ್ಯೆ: 080-43344334, 080-43344335, 080- 43344336 ಹಾಗೂ 080-43344342 ಗೆ ನೀಡುವಂತೆ ಪ್ರವಾಸೋದ್ಯಮ ಇಲಾಖೆ ನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.